ಬೆಂಗಳೂರು: ಇಂದು ರಾಜ್ಯದ ಪಾಲಿಗೆ ಮಹತ್ವದ ದಿನ. ಒಂದೆಡೆ ಕಾವೇರಿ ನದಿ ವಿವಾದಕ್ಕೆ ಸಂಬಂಧಿಸಿದ ಅಂತಿಮ ತೀರ್ಪು ಬರುವುದಿದ್ದರೆ, ಇನ್ನೊಂದೆಡೆ ರಾಜ್ಯ ಬಜೆಟ್ ಮಂಡನೆಯಾಗಲಿದೆ.
ಬೆಳಿಗ್ಗೆ 10.30 ರ ಸುಮಾರಿಗೆ ಕಾವೇರಿ ತೀರ್ಪು ಬರಲಿದೆ ಎಂದು ನಿರೀಕ್ಷಿಸಲಾಗಿದೆ. ಹೀಗಾಗಿ ರಾಜ್ಯಕ್ಕೆ ಅನ್ಯಾಯವಾದರೆ ಮತ್ತೆ ಪ್ರತಿಭಟನೆಯ ಕಾವು ಹೆಚ್ಚಾಗುವ ಸಾಧ್ಯತೆಯಿದೆ.
ಇನ್ನೊಂದೆಡೆ ಸಿಎಂ ಸಿದ್ದರಾಮಯ್ಯ ಇಂದು ದಾಖಲೆಯ ಬಜೆಟ್ ಮಂಡಿಸಲಿದ್ದು, ಇದು ಬೆಳಿಗ್ಗೆ 11.30 ಕ್ಕೆ ಮಂಡನೆಯಾಗಲಿದೆ. ಈ ಎಲ್ಲಾ ಹಿನ್ನಲೆಯಲ್ಲಿ ರಾಜ್ಯದ ಜನತೆಗೆ ಇವೆರಡೂ ಪ್ರಮುಖ ವಿಚಾರವಾಗಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ