Publish Date: Thu, 09 Feb 2023 (20:35 IST)
Updated Date: Thu, 09 Feb 2023 (20:36 IST)
ಮರಳು ತುಂಬಿದ್ದ ಟಿಪ್ಪರ್ ಲಾರಿ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಕಲಬುರಗಿಯ ವಾಡಿ ಪಟ್ಟಣದ ಕಲಕಂಬ್ ಬಡಾವಣೆಯಲ್ಲಿ ನಡೆದಿದೆ. ದುರ್ಘಟನೆಯಲ್ಲಿ ಯುವಕ ಮುಕಂದ್ ಮತ್ತು ಮಹಮ್ಮದ್ ಸಲೀಂ ಎಂಬ ವ್ಯಕ್ತಿ ಮೃತಪಟ್ಟಿದ್ದಾರೆ. ಮನೆ ನಿರ್ಮಾಣ ಕೆಲಸಕ್ಕೆ ಮರಳು ತಂದಿದ್ದ ಟಿಪ್ಪರ್ ಲಾರಿಯ ಮರಳು ಅನ್ಲೋಡ್ ಮಾಡಲು ಮುಂದಾದಾಗ ಈ ದುರ್ಘಟನೆ ಸಂಭವಿಸಿದೆ. ವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.