ಬೆಂಗಳೂರು: ಸರ್ಕಾರದ ವತಿಯಿಂದ ಇಂದು ಟಿಪ್ಪು ಜಯಂತಿ ಆಚರಣೆ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮಡಿಕೇರಿ, ಮಂಡ್ಯ ಜಿಲ್ಲೆಯಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಭದ್ರತೆಗಾಗಿ 1500 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು. ಮುಂಜಾಗ್ರತಾ ಕ್ರಮವಾಗಿ ಮಡಿಕೇರಿಯಲ್ಲಿ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಘೋಷಿಸಲಾಗಿದೆ.
ಶಾಂತವಾಗಿ ಟಿಪ್ಪು ಜಯಂತಿ ಆಚರಿಸುವಂತೆ ಆದೇಶಿಸಲಾಗಿದೆ. ಇನ್ನೊಂದೆಡೆ ಟಿಪ್ಪು ಜಯಂತಿ ವಿರೋಧಿ ಸಮಿತಿ ಮಡಿಕೇರಿ ಬಂದ್ ಗೆ ಕರೆ ನೀಡಿದೆ. ಒಟ್ಟಾರೆ ರಾಜ್ಯಾದ್ಯಂತ ಟಿಪ್ಪು ಜಯಂತಿ ಹಿನ್ನಲೆಯಲ್ಲಿ ಗಲಾಟೆಯಾಗದಂತೆ ಬಿಗಿ ಭದ್ರತೆ ಒದಗಿಸಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ