Publish Date: Tue, 24 Oct 2017 (13:24 IST)
Updated Date: Tue, 24 Oct 2017 (13:26 IST)
ರಾಜ್ಯ ಸರಕಾರದಿಂದ ಟಿಪ್ಪು ಜಯಂತಿ ಆಚರಣೆ ವಿಚಾರ ಕುರಿತಂತೆ ಯಾರೇ ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕೆಜಿಪಿಯಲ್ಲಿದ್ದಾಗ ಟಿಪ್ಪು ಜಯಂತಿ ಆಚರಿಸಿದ್ದರು. ಅಲ್ಲಾಹನ ಮೇಲೆ ಆಣೆ ಎಂತ ಹೇಳಿದ್ದರು. ಇದೀಗ ಬಿಜೆಪಿಗೆ ಬಂದ ಕೂಡಲೇ ರಾಜಕೀಯ ಕಾರಣಗಳಿಂದ ಟಿಪ್ಪು ಜಯಂತಿ ವಿರೋಧಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಕಾನೂನು ಸುವ್ಯವಸ್ಥೆ ಹಾಳಾಗದಂತೆ ಎಚ್ಚರಿಕೆ ವಹಿಸಿದ್ದೇವೆ. ಕಾನೂನು ಹದಗೆಡಲು ಪ್ರಯತ್ನಿಸಿದಲ್ಲಿ ಪೊಲೀಸರು ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸುತ್ತಾರೆ ಎಂದರು.
ಬಿಜೆಪಿಯವರಿಗೆ ಕೋಮುಸೌಹಾರ್ದತೆ ಕದಡುವುದೇ ಬಹುಮುಖ್ಯ ಕಾಯಕವಾಗಿದೆ. ಇಂತಹ ವರ್ತನೆಯಿಂದ ಮತದಾರರ ಮನ ಗೆಲ್ಲಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.