Publish Date: Mon, 06 Aug 2018 (15:33 IST)
Updated Date: Mon, 06 Aug 2018 (15:38 IST)
ಚಲಿಸುತ್ತಿದ್ದ ಲಾರಿಯ ಟಯರ್ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಉಡುಪಿ ಸಮೀಪದ ಕಿನ್ನಿಮುಲ್ಕಿ ಬಲಾಯಿಪಾದೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಚಲಿಸುತ್ತಿದ್ದ ಲಾರಿಯ ಟಯರ್ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.
ತುಮಕೂರಿನಿಂದ ಉಡುಪಿಗೆ ಸಿಮೆಂಟ್ ಸಾಗಿಸುತ್ತಿದ್ದ ಲಾರಿಯ ಹಿಂಬದಿ ಟಯರ್ ಸ್ಪೋಟಗೊಂಡಿತು. ಕೂಡಲೇ ಚಾಲಕ ಲಾರಿಯನ್ನು ರಸ್ತೆ ಬದಿ ನಿಲ್ಲಿಸಿದರು. ಈ ಸಂದರ್ಭ ಸ್ಪೋಟಗೊಂಡ ಟಯರ್‌ನಲ್ಲಿ ಬೆಂಕಿ ಕಾಣಿಸಿ ಕೊಂಡಿತ್ತೆನ್ನಲಾಗಿದೆ. ತಕ್ಷಣ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಮಾಹಿತಿ ನೀಡಲಾಯಿತು.
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಟಯರ್‌ನಲ್ಲಿನ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಇದರಿಂದ ಭಾರೀ ಅನಾಹುತವೊಂದು ತಪ್ಪಿದಂತಾಯಿತು. ಬೆಂಕಿಯಿಂದ ಟಯರ್ ಸಂಪೂರ್ಣ ಸುಟ್ಟು ಹೋಗಿದೆ.