ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ಗೆ ಬಿಜೆಪಿ ನಾಯಕರ ವಿರೋಧ ಹಿನ್ನೆಲೆಯಲ್ಲಿ ಇಂದು ಸಂಜೆ ರಾಯಣ್ಣ ಬ್ರಿಗೇಡ್‌ನ ತುರ್ತು ಸಭೆ ಕರೆಯಲಾಗಿದೆ.
ಶಾಸಕರ ಭವನದಲ್ಲಿ ಇಂದು ಸಂಜೆ 4 ಗಂಟೆಗೆ ಮಾಜಿ ಶಾಸಕ ವಿರುಪಾಕ್ಷಪ್ಪ ನೇತೃತ್ವದಲ್ಲಿ ರಾಯಣ್ಣ ಬ್ರಿಗೇಡ್ ತುರ್ತು ಸಭೆ ಕರೆಯಲಾಗಿದೆ. ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಸೇರಿದಂತೆ ಹಲವು ನಾಯಕರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ
ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಪಕ್ಷದ ವೇದಿಕೆ ಬಿಟ್ಟು ಪ್ರತ್ಯೇಕ ಸಂಘಟನೆ ಕಟ್ಟುವುದು ಸರಿಯಲ್ಲ. ಹೀಗಾಗಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕೈಬಿಡಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್‌ಲಾಲ್ ಅವರು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪನವರಿಗೆ ತಾಕೀತು ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ