ಕನ್ನಡಿಗರಲ್ಲದವರನ್ನು ರಾಜ್ಯಸಭೆಗೆ ಆಯ್ಕೆ ಮಾಡದಂತೆ ರಾಜ್ಯದಲ್ಲಿ ಕನ್ನಡಿಗರಿಂದ ಅಭಿಯಾನವೇ ಪ್ರಾರಂಭವಾಗಿದ್ದರು, ಭಾರತೀಯ ಜನತಾ ಪಾರ್ಟಿ ವೆಂಕಯ್ಯ ನಾಯ್ಡು ಅವರ ಹೆಸರನ್ನೇ ಅಂತಿಮಗೊಳಿಸಿದೆ.
ಸಾಕಷ್ಟು ವಿರೋಧಗಳ ನಡುವೆಯೇ, ಬಿಜೆಪಿ ವರಿಷ್ಠರ ಸೂಚನೆ ಮೇರೆಗೆ ವೆಂಕಯ್ಯ ನಾಯ್ಡು ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದು, ಬಿಜೆಪಿಯಿಂದ ಅಧಿಕೃತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ.
ಕರ್ನಾಟಕ ರಾಜ್ಯದಿಂದ ರಾಜ್ಯಸಭೆಗೆ ವೆಂಕಯ್ಯ ನಾಯ್ಡು ಅವರನ್ನು ಆಯ್ಕೆ ಮಾಡದಂತೆ ಆಗ್ರಹಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದವು. ಆದರೂ ಸಹ ಬಿಜೆಪಿ ಪಕ್ಷದಿಂದ ವೆಂಕಯ್ಯ ನಾಯ್ಡು ಅವರ ಹೆಸರನ್ನೆ ಅಂತಿಮಗೊಳಿಸಿರುವುದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
ವೆಬ್ದುನಿಯಾ ಮೊಬೈಲ್ ಆಪ್ (ಡೌನ್ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.