ಕುಂದಾನಗರಿ ಬೆಳಗಾವಿಯ ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಪ್ರಾರಂಭವಾಗಿದ್ದು, ಆಡಳಿತ ಹಾಗೂ ಪ್ರತಿಪಕ್ಷಗಳ ವಾಕ್ಸಮರಕ್ಕೆ ಸಜ್ಜಾಗಿವೆ.
ಕಳಸಾ ಬಂದೂರಿ ಹಾಗೂ ಮಹದಾಯಿ ವಿಚಾರದ ಚರ್ಚೆಗೆ ಅಧಿವೇಶನ ವೇದಿಕೆಯಾಗಲಿದೆ. ಇನ್ನು ಶಿಕ್ಷಣ ಸಚಿವ ತನ್ವೀರ್ ಸೇಠ್ ಪ್ರಕರಣ ಉಭಯ ಸದನಗಳಲ್ಲಿ ಪ್ರತಿಧ್ವನಿಸುವ ಸಾಧ್ಯತೆ ಹೆಚ್ಚಾಗಿದೆ. ಆದರೆ, ಪ್ರತಿಪಕ್ಷಗಳನ್ನು ಎದುರಿಸಲು ಆಡಳಿತ ಪಕ್ಷ ಕೂಡಾ ಸಜ್ಜಾಗಿದೆ.
ಅಧಿವೇಶನದ ವೇಳೆ ಪ್ರತಿಭಟನೆಗಳು ಸಹ ಹೆಚ್ಚಾಗಿ ನಡೆಯುವ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ ಸುವರ್ಣಸೌಧದ ಸುತ್ತ ಬಿಗಿ ಭದ್ರತೆ ಹಾಗೂ 144 ಕಲಂ ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ