Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಮಹಿಳಾ ಪೊಲೀಸ್ ಸಿಬ್ಬಂದಿಗೆ ಶೌಚಾಲಯ ಹೊಂದಿರುವ ವಾಹನ

ಮಹಿಳಾ ಪೊಲೀಸ್ ಸಿಬ್ಬಂದಿಗೆ ಶೌಚಾಲಯ ಹೊಂದಿರುವ ವಾಹನ
Bangalore , ಶನಿವಾರ, 28 ಜನವರಿ 2017 (15:10 IST)
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ  ಪೊಲೀಸ್ ಇಲಾಖೆ ಹೆಚ್ಚು ದಕ್ಷತೆಯಿಂದ ಹಾಗೂ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು ಎಂಬ ಉದ್ದೇಶದಿಂದ ಅನೇಕ ಸೌಲಭ್ಯ ಹಾಗೂ ಸೌಕರ್ಯಗಳನ್ನು ಒದಗಿಸಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
 
ಕರ್ನಾಟಕ ರಾಜ್ಯ ಸಶಸ್ತ್ರ ಮೀಸಲು ಪಡೆಗೆ ಹೊಸದಾಗಿ ಸೇರ್ಪಡೆಯಾಗಿರುವ ಆಧುನಿಕ ತಂತ್ರಜ್ಞಾನ ಸೌಲಭ್ಯ ಹೊಂದಿರುವ 102 ಬಸ್‍ಗಳಿಗೆ ಚಾಲನೆ ನೀಡಿ  ಮಾತನಾಡಿದ ಮುಖ್ಯಮಂತ್ರಿಗಳು ಪೊಲೀಸರು ಒತ್ತಡದಲ್ಲಿ ಕೆಲಸ ಮಾಡುತ್ತಾರೆ.  ಅವರಿಗೆ ಸೌಲಭ್ಯಗಳನ್ನು ಒದಗಿಸುವುದು ಸರ್ಕಾರದ ಜವಾಬ್ದಾರಿ ಎಂದು ಹೇಳಿದರು.  ಈ 102 ವಾಹನಗಳಿಗೆ 24 ಕೋಟಿ ರೂ. ಖರ್ಚು ತಗಲಿದ್ದು ಈಗಾಗಲೇ ಸುಮಾರು 300 ವಾಹನಗಳನ್ನು ಗಸ್ತು ತಿರುಗುವ ಪೊಲೀಸರಿಗೆ ನೀಡಲಾಗಿದೆ ಎಂದು ಅವರು ಮಾತನಾಡಿದರು.
 
ಅಪಘಾತ ಸಂಭವಿಸಿದಾಗ ಗಾಯಾಳುಗಳಿಗೆ ನೆರವಾಗಲು, ಅಪರಾಧಗಳನ್ನು ನಿಯಂತ್ರಿಸಲು ವೇಗ ಹೊಂದಿರುವ ವಾಹನಗಳ ಅಗತ್ಯವಿದೆ ಎಂಬುದನ್ನು ಮನಗಂಡು ಈ ಕ್ರಮ ಕೈಗೊಳ್ಳಲಾಗಿದೆ.  ನಮ್ಮ ಸರ್ಕಾರ ಬಂದಮೇಲೆ ಬೆಂಗಳೂರು ನಗರ  ಹಾಗೂ ಇತರ ನಗರಗಳಲ್ಲಿ ಗಸ್ತು ತಿರುಗುವ ಹಾಗೂ ಅಪರಾಧಗಳನ್ನು ನಿಯಂತ್ರಿಸುವ ಕೆಲಸವನ್ನು ಈ ವಾಹನಗಳು ಮತ್ತು ವಾಹದಲ್ಲಿರುವ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಾರೆ ಎಂದರು.
 
ಮಹಿಳಾ ಪೊಲೀಸ್ ಸಿಬ್ಬಂದಿಗಳಿಗೆ ಶೌಚಾಲಯ ಸೌಲಭ್ಯ ಹೊಂದಿರುವ ವಾಹನಗಳನ್ನು ಒದಗಿಸುವ ಬಗ್ಗೆಯೂ ಪರಿಶೀಲಿಸಲಾಗುತ್ತಿದೆ ಎಂದ ಮುಖ್ಯಮಂತ್ರಿಗಳು ನಮ್ಮ ಸರ್ಕಾರ ಪೊಲೀಸ್ ಸಿಬ್ಬಂದಿಗೆ ಕ್ಯಾಂಟಿನ್ ಸೌಲಭ್ಯ, ಆರೋಗ್ಯ ತಪಾಸಣೆಗೆ ವರ್ಷಕ್ಕೆ 1,000 ರೂ. ನೀಡಲಾಗುತ್ತಿದೆ.  ಅಲ್ಲದೆ ಪೊಲೀಸರ ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಸಿ.ಬಿ.ಎಸ್.ಸಿ. ಶಾಲೆಯ ಮಾದರಿಯಂತೆ ಬೆಂಗಳೂರು ಮತ್ತು ಮೈಸೂರುಗಳಲ್ಲಿ ಈಗಾಗಲೇ ಶಾಲೆ ಪ್ರಾರಂಭಿಸಿದ್ದು ಮುಂದಿನ ದಿನಗಳಲ್ಲಿ ಎಲ್ಲಾ ವಲಯಗಳಲ್ಲೂ ಶಾಲೆಗಳನ್ನು ತೆರೆಯಲಾಗುವುದು ಎಂದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಪೊಲಿಸರ ಮಕ್ಕಳಿಗೆ ಸಿಬಿಎಸ್ಇ ಶಾಲೆ