Select Your Language

Notifications

webdunia
webdunia
webdunia
webdunia

ನಾಳೆ ಕೋಟೆನಾಡಿನಲ್ಲಿ ‘ನಮೋ’ ಘರ್ಜನೆ

Tomorrow
ರಾಜ್ಯದ ನಾಲ್ಕು ದಿಕ್ಕಿನಲ್ಲೂ ಕಮಲವನ್ನು ಅರಳಿಸಲು ಬಿಜೆಪಿ ಟೊಂಕ ಕಟ್ಟಿ ನಿಂತಿದೆ. ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸ ಮಾಡುತ್ತಿದ್ದು, ಭರ್ಜರಿ ಮತಬೇಟೆ ನಡೆಸುತ್ತಿದ್ದಾರೆ. ನಾಳೆ ಬೆಳಗ್ಗೆ 10:30ಕ್ಕೆ ಕೋಟೆನಾಡು ಚಿತ್ರದುರ್ಗಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ. ನಗರದ ಜಯದೇವ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ನಡೆಯುವ ಪ್ರಚಾರ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಮೊದಲು ಒನಕೆ ಓಬವ್ವ ಸ್ಟೇಡಿಯಂಗೆ ಆಗಮಿಸಲಿರುವ ಪ್ರಧಾನಿ ಮೋದಿಯವರು ಅಲ್ಲಿಂದ ಓಕಾರ್ ಮೂಲಕ ಜಯದೇವ ಕ್ರೀಡಾಂಗಣಕ್ಕೆ ಆಗಮಿಸುತ್ತಾರೆ. ಈ ಹಿನ್ನೆಲೆ ನಗರದಲ್ಲಿ ಪೊಲೀಸ್​ ಬಿಗಿ ಭದ್ರತೆ ಮಾಡಲಾಗಿದೆ.. ಇನ್ನು ಬೃಹತ್ ಸಮಾವೇಶದಲ್ಲಿ ಚಿತ್ರದುರ್ಗ, ದಾವಣಗೆರೆ ಜಿಲ್ಲೆಯ ಜನ ಭಾಗಿಯಾಗಲಿದ್ದು, ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ. ಬಿಜೆಪಿ ಪ್ರಚಾರ ಸಭೆಗೆ 75 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. 5 ಕಡೆ ವಾಹನಗಳ ಪಾರ್ಕಿಂಗ್​ಗೆ ವ್ಯವಸ್ಥೆ ಮಾಡಲಾಗಿದೆ. ಸಮಾವೇಶಕ್ಕೆ ಬಂದವರಿಗೆ ಕುಡಿಯಲು ನೀರಿನ ವ್ಯವಸ್ಥೆ ಮಾಡಲಾಗಿದೆ. ಚಿತ್ರದುರ್ಗದ 6 ಕ್ಷೇತ್ರ, ದಾವಣಗೆರೆಯ 4 ಕ್ಷೇತ್ರ ವ್ಯಾಪ್ತಿಯ ಸಮಾವೇಶ ನಡೆಯಲಿದ್ದು, 10 ಕ್ಷೇತ್ರದ ಅಭ್ಯರ್ಥಿಗಳ‌ ಪರ ಪ್ರಧಾನಿ ಮೋದಿ ಮತಯಾಚಿಸಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಣಾಳಿಕೆಯಲ್ಲಿ ಕೃಷಿಗೆ ಹೆಚ್ಚು ಆದ್ಯತೆ