ಬೆಂಗಳೂರು : ನಾಳೆ 66 ನೇ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆ ಹಿನ್ನೆಲೆ ಕಂಠೀರವ ಸ್ಟೇಡಿಯಂನಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ನಾಳೆ (ನವೆಂಬರ್ 1) ನಡೆಯುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ 400 ರಿಂದ 500 ಶಿಕ್ಷಕರಿಗೆ ಮಾತ್ರ ಅವಕಾಶ ಇರಲಿದೆ. ಕೊವಿಡ್ ನಿಯಮಾವಳಿಗಳನ್ನು ಅನುಸರಿಸಿಕೊಂಡು ಕನ್ನಡ ರಾಜ್ಯೋತ್ಸವಕ್ಕೆ ಸಿದ್ಧತೆ ಮಾಡಿದ್ದು, ಎಲ್ಲಾ ಶಾಲೆಗಳಲ್ಲಿ ಸರಳವಾಗಿ ಕನ್ನಡ ರಾಜ್ಯೋತ್ಸವವನ್ನು ಆಚಾರಿಸಲು ಸೂಚನೆ ನೀಡಲಾಗಿದೆ.
ಕಳೆದ ಬಾರಿ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಶಾಲೆಗಳು ಸಂಪೂರ್ಣವಾಗಿ ಬಂದ್ ಆಗಿದ್ದವು. ಹೀಗಾಗಿ ಶಾಲೆಗಳಲ್ಲಿ ನಾಡ ಹಬ್ಬ ಕನ್ನಡ ರಾಜ್ಯೋತ್ಸವವನ್ನು ಆಚಾರಿಸಲು ಸಾಧ್ಯವಾಗಿರಲಿಲ್ಲ. ಈ ವರ್ಷ ಕೊವಿಡ್ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಹೀಗಾಗಿ ಶಾಲೆಗಳಲ್ಲಿಯೂ ಕನ್ನಡ ರಾಜ್ಯೋತ್ಸವ ಆಚಾರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಕಂಠೀರವ ಸ್ಟೇಡಿಯಂನಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಉಧ್ಘಾಟನೆ ಮಾಡಲಿದ್ದು, ಶಿಕ್ಷಣ ಸಚಿವ ನಾಗೇಶ್, ರಿಸ್ಚನ್ ಹರ್ಷದ್ ಹಾಜರಿರಲಿದ್ದಾರೆ. ನಾಳೆ ಬೆಳಿಗ್ಗೆ 9 ಗಂಟೆಯಿಂದ ಕಾರ್ಯಕ್ರಮ ಆರಂಭವಾಗಿ 11 ಗಂಟೆಯವರೆಗೆ ಕಾರ್ಯಕ್ರಮ ನಡೆಯಲಿದೆ.