ಕೇಂದ್ರ ಸರಕಾರ ಸಾಮಾನ್ಯ ಹೋಟೆಲ್‌ಗಳ ಮೇಲೆ ದುಬಾರಿ ತೆರಿಗೆ ಹೇರಿರುವುದನ್ನು ವಿರೋಧಿಸಿ ನಾಳೆ ಹೋಟೆಲ್‌ಗಳನ್ನು ಬಂದ್ ಮಾಡಲು ತೀರ್ಮಾನಿಸಲಾಗಿದೆ ಎಂದು ನಗರ ಹೋಟೆಲ್ ಸಂಘದ ಅಧ್ಯಕ್ಷ ಚಂದ್ರಶೇಖರ್ ಹೆಬ್ಬಾರ್ ಹೇಳಿದ್ದಾರೆ.
ನಾಳೆ ಬೆಳಿಗ್ಗೆ ಐದು ಗಂಟೆಯಿಂದ ಹೋಟೆಲ್‌ಗಳು ರಸ್ತೆ ಬದಿಯ ಬೇಕರಿ ಮತ್ತು ಸಣ್ಣಪುಟ್ಟ ಆಹಾರ ಕೇಂದ್ರಗಳು ಕೂಡಾ ಬಂದ್‌ಗೆ ಬೆಂಬಲ ಸೂಚಿಸಿರುವುದರಿಂದ ಗ್ರಾಹಕರು ತೀವ್ರ ತೊಂದರೆ ಎದುರಿಸುವಂತಹ ಸ್ಥಿತಿ ನಿರ್ಮಾಣವಾಗಲಿದೆ.
ಹವಾನಿಯಂತ್ರಿತ ಹೋಟೆಲ್‌ಗಳಿಗೆ ಶೇ.18 ರಷ್ಟು ತೆರಿಗೆ ದರ ವಿಧಿಸಿದ್ದರೆ, ಸಾಮಾನ್ಯ ಹೋಟೆಲ್‌ಗಳಿಗೆ ಶೇ.12 ರಷ್ಟು ತೆರಿಗೆ ದರವನ್ನು ವಿಧಿಸಿರುವ ಕೇಂದ್ರ ಸರಕಾರದ ಕ್ರಮ ಅವೈಜ್ಞಾನಿಕ ಎಂದು ಕಿಡಿಕಾರಿದ್ದಾರೆ.
ಮೆಡಿಕಲ್ ಶಾಪ್ ಬಂದ್
ಕೇಂದ್ರ ಸರಕಾರ ಆನ್‌ಲೈನ್ ಔಷಧಿ ಮಾರಾಟಕ್ಕೆ ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಮೆಡಿಕಲ್ ಶಾಪ್ ಮಾಲೀಕರು ಕೂಡಾ ಬಂದ್‌ಗೆ ಕರೆ ನೀಡಿದ್ದಾರೆ.
ಕೇಂದ್ರ ಸರಕಾರ ಆನ್‌ಲೈನ್ ಔಷಧಿ ಮಾರಾಟಕ್ಕೆ ಅನುಮತಿ ನೀಡಿದ್ದರಿಂದ ಮೆಡಿಕಲ್ ಮಾಲೀಕರು ನಷ್ಟ ಅನುಭವಿಸಬೇಕಾಗುತ್ತದೆ. ಇದನ್ನು ಯಾವುದೇ ರೀತಿಯಿಂದಲೂ ಸಹಿಸಲು ಸಾಧ್ಯವಿಲ್ಲ ಎಂದು ಮೆಡಿಕಲ್ ಶಾಪ್ ಮಾಲೀಕರ ಸಂಘದ ಅಧ್ಯಕ್ಷ ಮಾಯಣ್ಣ ತಿಳಿಸಿದ್ದಾರೆ.
ತೆರಿಗೆ ದರ ಏರಿಕೆ ವಿರೋಧಿಸಿ ಟೌನ್‌ಹಾಲ್ ಬಳಿ ಸಾವಿರಾರು ಸಂಖ್ಯೆಯಲ್ಲಿ ಹೋಟೆಲ್ ಮಾಲೀಕರು ಪ್ರತಿಭಟನೆ ನಡೆಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೋಟೆಲ್ ಮಾಲೀಕರ ಸಂಘದ ಮೂಲಗಳು ತಿಳಿಸಿವೆ.
ನಾಳೆ ಕೇವಲ ಸರಕಾರಿ ಸಂಚಾಲಿತ ಮೆಡಿಕಲ್ ಶಾಪ್‌ಗಳು ಮಾತ್ರ ತೆರೆದಿರಲಿವೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.