Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಜನತೆಯ ಹಿತದೃಷ್ಟಿಯಿಂದ ಕಠಿಣ ಕ್ರಮ: ಸುಧಾಕರ್

ಜನತೆಯ ಹಿತದೃಷ್ಟಿಯಿಂದ ಕಠಿಣ ಕ್ರಮ: ಸುಧಾಕರ್
ಬೆಂಗಳೂರು , ಸೋಮವಾರ, 27 ಡಿಸೆಂಬರ್ 2021 (15:12 IST)
ಬೆಂಗಳೂರು : ಜನತೆಯ ಹಿತದೃಷ್ಟಿಯಿಂದ ಕೆಲವು ಸಂದರ್ಭದಲ್ಲಿ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ನೈಟ್ ಕಫ್ರ್ಯೂ ಬಗ್ಗೆ ಜನರಿಗೆ ಅಸಮಾಧಾನವಾಗುತ್ತಿರುವ ಹಿನ್ನೆಲೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೈಟ್ ಕಫ್ರ್ಯೂ ಕೇವಲ ಹತ್ತು ದಿನಗಳ ಕಾಲ ಮಾತ್ರ.

ಈ ರೀತಿ ಕ್ರಮಗಳನ್ನು ತೆಗೆದುಕೊಳ್ಳಲು ನಮಗೇನು ಖುಷಿ ಇಲ್ಲ. ಜನತೆಯ ಹಿತದೃಷ್ಟಿಯಿಂದ ಕೆಲವು ಸಂದರ್ಭದಲ್ಲಿ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತೆ.

ತಾಂತ್ರಿಕ ಸಲಹಾ ಸಮಿತಿ ಕೊಟ್ಟ ಸಲಹೆಗಳ ಪ್ರಕಾರ ಕ್ರಮ ತೆಗೆದುಕೊಂಡಿದ್ದೇವೆ. ಜನತೆ ದಯಮಾಡಿ ಸಹಕಾರ ಮಾಡಬೇಕು. ಹದಿನಾಲ್ಕು ದಿನಗಳ ಕಾಲ ಆದ ನಂತರ ಪರಿಸ್ಥಿತಿ ನೋಡಿ ಕ್ರಮ ಕೈಗೊಳ್ತೀವಿ ಎಂದು ಮನವಿ ಮಾಡಿಕೊಂಡರು.

ಸಂಕ್ರಾಂತಿ ನಂತರ ರಾಜಕೀಯದಲ್ಲಿ ಕೆಲ ಬದಲಾವಣೆ ವಿಚಾರವಾಗಿ, ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಎಲ್ಲ ಕೆಲಸಗಳು ಆಗ್ತಿವೆ. ಸರ್ಕಾರ ಉತ್ತಮವಾಗಿ ನಡೆಯುತ್ತಿದೆ. ಇದು ಇನ್ನಷ್ಟು ಗಟ್ಟಿ ಆಗುತ್ತದೆ.

ವಿರೋಧ ಪಕ್ಷಗಳು ಕೂಡಾ ನಮ್ಮ ಅಭಿವೃದ್ಧಿ ಕೆಲಸಗಳನ್ನು ನೋಡಿ ಹತಾಶರಾಗ್ತಾರೆ. ಸಚಿವರ ಬದಲಾವಣೆ ವಿಚಾರ ಸಿಎಂ ವಿವೇಚನೆಗೆ ಬಿಟ್ಟದ್ದು. ಯಾರು ತಂಡದಲ್ಲಿ ಇರಬೇಕು, ಯಾರು ಇರಬಾರದು ಅನ್ನೋದನ್ನು ಸಿಎಂ ನಿರ್ಧಾರ ಮಾಡ್ತಾರೆ ಎಂದರು.


Share this Story:

Follow Webdunia kannada

ಮುಂದಿನ ಸುದ್ದಿ

ನನ್ನ ಹೇಳಿಕೆ ಹಿಂಪಡೆಯುತೇನೆ - ತೇಜಸ್ವಿ ಸೂರ್ಯ