ಟೋಯಿಂಗ್ ಕಿರಿಕ್ ಕಮಲ್ ಪಂತ್ ವಾರ್ನಿಂಗ್

Webdunia
ಸೋಮವಾರ, 31 ಜನವರಿ 2022 (15:25 IST)
ಟೋಯಿಂಗ್ ನಿಯಮಗಳನ್ನು ಪಾಲಿಸದ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟೋಯಿಂಗ್ ಸಿಬ್ಬಂದಿ ವರ್ತನೆ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ, ಅಸಮಾಧಾನ ವ್ಯಕ್ತವಾಗಿದೆ.
ಯಾವ ಸ್ಥಳಗಳಲ್ಲಿ ಘಟನೆ ನಡೆದಿದೆಯೋ ಆ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.
 
ಮೊನ್ನೆ ನಡೆದ ಘಟನೆ ಬಗ್ಗೆ ಸಂಬಂಧಪಟ್ಟ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಸಿಬ್ಬಂದಿ ಎಲ್ಲೆಲ್ಲಿ ದುವರ್ತನೆ ತೋರಿದ್ದಾರೊ ಅದರ ಬಗ್ಗೆ ಹಿರಿಯ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಾರೆ ಎಂದು ಹೇಳಿದರು.
 
ಎಎಸ್‍ಐ ನಾರಾಯಣ್ ವಿರುದ್ಧ ಸದ್ಯ ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ. ಅಧಿಕಾರಿಗಳು ಪರಿಶೀಲನೆ ನಡೆಸಿ ಮುಂದಿನ ಕ್ರಮ ತೆಗೆದುಕೊಳ್ಳುತ್ತಾರೆ. ಇಂದು ಸಿಎಂ ಅವರ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಲಿದ್ದು, ಯಾವ ಯಾವ ತೀರ್ಮಾನ ಆಗುತ್ತದೆಯೋ ಅದನ್ನು ಯಥಾವತ್ತಾಗಿ ಪಾಲಿಸಲಾಗುತ್ತದೆ ಎಂದು ಆಯುಕ್ತರು ತಿಳಿಸಿದರು.
 
ಟೋಯಿಂಗ್ ವಾಹನಗಳನ್ನು ಖಾಸಗಿಗೆ ನೀಡಿರುವ ವಿಚಾರದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಕಳೆದ ಐದು ವರ್ಷಗಳಿಂದ ಇದು ಜಾರಿಯಲ್ಲಿದೆ. 40 ಪೊಲೀಸ್ ಠಾಣೆಗಳ ಸಿಬ್ಬಂದಿ ವಾಹನಗಳನ್ನು ನಿರ್ವಹಣೆ ಮಾಡುವುದು ಅಸಾಧ್ಯ.
 
ವಾಹನಗಳ ಖರೀದಿ ವಿಚಾರ ಸೇರಿದಂತೆ ಕೆಲವು ಅಡೆತಡೆಗಳಿವೆ. ಎಲ್ಲವನ್ನು ಮುಖ್ಯಮಂತ್ರಿಗಳ ಸಭೆಯಲ್ಲಿ ತೀರ್ಮಾನಿಸಿ ಕ್ರಮ ಕೈಗೊಳ್ಳುವುದಾಗಿ ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿನ್ನವಿಲ್ಲ, ವಜ್ರವಿಲ್ಲ: ಕೇರಳದ ವಧುವೊಬ್ಬಳು ಚಿನ್ನಾಭರಣವಿಲ್ಲದ ಲುಕ್‌ ದೇಶದೆಲ್ಲೆಡೆ ಸದ್ದು

ಮಾಸ್ಕ್ ಹಾಕಿಕೊಂಡು ಬಿಎಂಟಿಸಿ ಏರಿದ ಸಚಿವ ಬೈರತಿ ಸುರೇಶ್: ಚಿಲ್ರೆ ಇಲ್ಲ ಎಂದರೆ ಸಚಿವರನ್ನೇ ಬಸ್ ನಿಂದ ಕೆಳಿಗಿಳಿಸೋದಾ Video

Video: ಹೀಗಾದ್ರೆ ಡೆಲಿವರಿ ಬಾಯ್ಸ್‌ಗೆ ಡೋರ್ ಓಪನ್ ಮಾಡುವುದು ಹೇಗೆ, ತನಗಾದ ಕೆಟ್ಟ ಅನುಭವ ಬಿಚ್ಚಿಟ್ಟ ಯುವತಿ

Karnataka Weather: ನಿರಂತರ ಮಳೆಯಾಗಿರುವ ಕರಾವಳಿ ಭಾಗದಲ್ಲಿ ಇಂದು ಹೇಗಿರಲಿದೆ ಗೊತ್ತಾ ಹವಾಮಾನ

ಎಸ್‌ ಜಾನಕಿ ಪ್ರತಿ ಮಲಯಾಳಿ ಮನೆಯ ಸದಸ್ಯರಾಗಿದ್ದಾರೆ: ಕೇರಳ ಸಿಎಂ ವಿಡಿ ಸತೀಶನ್‌

ಮುಂದಿನ ಸುದ್ದಿ
Show comments