ಮಂಗಳೂರು ಜಂಕ್ಷನ್ ಮಧ್ಯೆ ಹಗಲು ಸಂಚರಿಸುವ ವಿಸ್ಟಾಡೋಮ್ ಬೋಗಿಗಳ ರೈಲಿಗೆ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು.
ಸಂಸದ ನಳಿನ್ ಕುಮಾರ್ ಕಟೀಲ್ ಭಾನುವಾರ ಬೆಳಿಗ್ಗೆ ಮಂಗಳೂರು ಹಾಗೂ ಬೆಂಗಳೂರು ರೈಲಿಗೆ ಹಸಿರು ನಿಶಾನೆ ತೋರಿದರು.
ಈ ಸಂದರ್ಭದಲ್ಲಿ ಶಾಸಕ ವೇದವ್ಯಾಸ ಕಾಮತ್, ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಮೇಯರ್ ಪ್ರೇಮಾನಂದ ಶೆಟ್ಟಿ, ಡಿಆರ್ ಎಂ ಕೊಠಾರಿ, ಕಾರ್ಪೋರೆಟ್ ಗಳಾದ ಸುಧೀರ್, ಶೋಭಾ, ರೈಲ್ವೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ವಿಸ್ಟಾಡೋಮ ಬೋಗಿಯಲ್ಲಿ 44 ಮಂದಿ ಪ್ರಯಾಣಿಸಬಹುದಾಗಿದೆ. ಎರಡು ಬೋಗಿಯಲ್ಲಿ 88 ಮಂದಿ ಪ್ರಯಾಣಿಸಬಹುದಾಗಿದೆ.
ಈ ವಿಶೇಷ ಬೋಗಿಯು ಪಶ್ಚಿಮ ಘಟ್ಟದ ನಡುವೆ ಸಂಚರಿಸುವ ಸಂದರ್ಭ ರೈಲು ಪ್ರಯಾಣಿಕರಿಗೆ ಪ್ರಕೃತಿಯ ರಮಣೀಯ ಸೌಂದರ್ಯವನ್ನು ಕಣ್ತುಂಬಿಸುವ ಅವಕಾಶ ಸಿಗಲಿವೆ.
ಪಶ್ಚಿಮಘಟ್ಟ ಮತ್ತು ಕರಾವಳಿ ಭಾಗದಲ್ಲಿ ಸಂಚರಿಸುವ ಮೂರು ರೈಲುಗಳ ದ್ವಿತೀಯ ದರ್ಜೆಯ ಒಂದು ಸಾಮಾನ್ಯ ಬೋಗಿಯನ್ನು ತೆಗೆದು ತಲಾ ಎರಡು ವಿಸ್ಟಾಡೋಮ್ ಕೋಚ್ಗಳನ್ನು ಜೋಡಿಸಲಾಗಿದೆ. ಬೆಂಗಳೂರು-ಮಂಗಳೂರು ನಡುವೆ ಸಕಲೇಶಪುರದಿಂದ ಸುಬ್ರಹ್ಮಣ್ಯದವರೆಗೆ ಹಾದುಹೋಗುವ 55 ಕಿ.ಮೀ. ರೈಲು ಮಾರ್ಗ ಪ್ರಯಾಣಿಕರು ಪ್ರಕೃತಿಯ ಸೊಬಗಿನ ದರ್ಶನವನ್ನು ಪಡೆಯಲಿದ್ದಾರೆ.