Publish Date: Fri, 26 Jun 2020 (17:45 IST)
Updated Date: Fri, 26 Jun 2020 (17:47 IST)
ಕೊರೊನಾ ವೈರಸ್ ನಿಯಂತ್ರಣಕ್ಕೆ ಹೇರಲಾಗಿದ್ದ ಲಾಕ್ ಡೌನ್ ಕಾರಣ ಸ್ಥಗಿತಗೊಂಡಿದ್ದ ರೈಲು ಸೇವೆ ಮತ್ತೆ ಆರಂಭಗೊಳ್ಳುವ ಸೂಚನೆ ಸಿಕ್ಕಿದೆ.
ರೈಲು ಸೇವೆ ಆರಂಭಿಸುವಂತೆ ರಾಜ್ಯಗಳ ಮುಖ್ಯಮಂತ್ರಿಗಳು ಮನವಿ ಮಾಡಿದರೆ, ದೇಶದಲ್ಲಿ ಮತ್ತೆ ರೈಲು ಸೇವೆ ಪ್ರಾರಂಭಿಸಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಹೇಳಿದ್ದಾರೆ.
ದೇಶಾದ್ಯಂತ ಕೋವಿಡ್ -19 ವೈರಸ್ ಹರಡುತ್ತಿರುವುದರಿಂದ ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅನಿವಾರ್ಯ. ಇದರೊಂದಿಗೆ ದೇಶದ ಆರ್ಥಿಕ ಪರಿಸ್ಥಿತಿಯು ವೃದ್ಧಿ ಆಗಬೇಕಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಗಳಿಂದ ಕೇಂದ್ರಕ್ಕೆ ಮನವಿ ಬಂದರೆ ಮಾತ್ರ ರೈಲು ಸೇವೆ ಆರಂಭಿಸಲಾಗುವುದು ಎಂದಿದ್ದಾರೆ.