Webdunia - Bharat's app for daily news and videos

Install App

ಪಿಯುಸಿಯಿಂದಲೇ ಸಿಇಟಿ, ನೀಟ್ ಪರೀಕ್ಷೆಗೆ ತರಬೇತಿ

Webdunia
ಭಾನುವಾರ, 30 ಜನವರಿ 2022 (20:43 IST)
ಬೆಂಗಳೂರು: ಮುಂದಿನ ಶೈಕ್ಷಣಿಕ ಸಾಲಿನಿಂದ ಪ್ರಥಮ ಪಿಯುಸಿ ಹಂತದಿಂದಲೇ ಸಿಇಟಿ ಮತ್ತು ನೀಟ್ ಪರೀಕ್ಷೆಗೆ ತರಬೇತಿ ನೀಡಲು ಪದವಿಪೂರ್ವ ಶಿಕ್ಷಣ ಇಲಾಖೆ ತೀರ್ಮಾನಿಸಿದೆ.
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ವೈದ್ಯಕೀಯ, ಎಂಜಿನಿಯರಿಂಗ್ ಮತ್ತಿತರ ವೃತ್ತಿಪರ ಕೋರ್ಸುಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವೇಶ ಪಡೆಯಲು ಅನುಕೂಲವಾಗುವಂತೆ ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಥಮ ಪಿಯುಸಿ ಹಂತದಿಂದಲೇ ಸರ್ಕಾರಿ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ನೀಟ್, ಸಿಇಟಿ ಪರೀಕ್ಷೆಗೆ ತರಬೇತಿ ನೀಡಲಾಗುತ್ತದೆ.
ಈ ಹಿಂದೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಇಟಿ ಪರೀಕ್ಷೆ ತರಬೇತಿ ನೀಡಲಾಗುತ್ತಿದ್ದು, ಬಳಿಕ ಯೋಜನೆ ಕೈಬಿಡಲಾಗಿತ್ತು. NCERT ಪಠ್ಯಕ್ರಮದ ಅನ್ವಯ ಮತ್ತು ಪ್ರಥಮ ಪಿಯುಸಿ ಹಂತದಿಂದಲೇ ಸರ್ಕಾರಿ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ಸಿಇಟಿ ಮತ್ತು ಪರೀಕ್ಷೆಗೆ ತರಬೇತಿ ನೀಡಲಾಗುತ್ತದೆ. ಪ್ರತಿ ತಾಲೂಕಿನಲ್ಲಿ ಒಂದು ನೋಡಲ್ ಕಾಲೇಜು ಗುರುತಿಸಿ ತರಬೇತಿ ನೀಡಲಾಗುವುದು ಎನ್ನಲಾಗಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಿಶ್ವಾಸ ಕಿರಣ ಯೋಜನೆಯಡಿ ಇಂಗ್ಲಿಷ್ ತರಬೇತಿ ನೀಡುತ್ತಿದ್ದು, ಇದನ್ನು ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ವಿಸ್ತರಿಸಲು ಪರವಿಪೂರ್ವ ಶಿಕ್ಷಣ ಇಲಾಖೆ ತೀರ್ಮಾನಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಗಳ ಶಿಕ್ಷಣಕ್ಕಾಗಿ ಬರಿಗಾಲಿನಲ್ಲಿ ಮ್ಯಾರಥಾನ್‌ನಲ್ಲಿ ಓಡಿದ ತಾಯಿ, ಮುಂದೇ ನಡೆದಿದ್ದು ಇತಿಹಾಸ, Video

Karnataka Weather: ರಾಜ್ಯದ ಹವಾಮಾನದಲ್ಲಿ ಇಂದಿನಿಂದ ಮಹತ್ವದ ಬದಲಾವಣೆ

ಮಹಿಳಾ ಕಾನ್ಸ್ ಟೇಬಲ್ ಜೊತೆ ಪತಿ ರೊಮ್ಯಾನ್ಸ್: ರೆಡ್ ಹ್ಯಾಂಡ್ ಆಗಿ ಹಿಡಿದ ಪತ್ನಿ Video

ಅಮ್ಮ ನಿಜಕ್ಕೂ ಮಕ್ಕಳ ಪಾಲಿನ ದೇವರು… ಮಗಳ ವಿದ್ಯಾಭ್ಯಾಸಕ್ಕಾಗಿ ವಯಸ್ಸೂ ಲೆಕ್ಕಿಸದೇ ಈ ತಾಯಿ ಮಾಡಿದ ಕೆಲಸ ನೋಡಿ Video

3 ರೂ ನಾನು ಕಡಿಮೆ ಕೊಟ್ರೆ ನೀವು ಒಪ್ಪಿಕೊಳ್ತೀರಾ.. 7 ರೂ ಟಿಕೆಟ್ ಗೆ 10 ರೂ ತಗೊಂಡ ಕಂಡಕ್ಟರ್ ಗೆ ಮಹಿಳೆ ಕ್ಲಾಸ್ Video

ಮುಂದಿನ ಸುದ್ದಿ
Show comments