Publish Date: Fri, 28 Aug 2020 (23:06 IST)
Updated Date: Fri, 28 Aug 2020 (23:08 IST)
ರಾಜ್ಯ ಸರಕಾರವು ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಶುಭ ಸುದ್ದಿ ಕೊಟ್ಟಿದೆ.
ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಸಿದ್ಧತೆ ನಡೆದಿದ್ದು, ಸೆಪ್ಟೆಂಬರ್‌ನಲ್ಲಿ ವರ್ಗಾವಣೆ ಪ್ರಕ್ರಿಯೆ ಶುರುವಾಗಲಿದೆ.
ಹೀಗಂತ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.
ಎಸ್ ಎಸ್ ಎಲ್ ಸಿ ಪರೀಕ್ಷಾ ಮಂಡಳಿ ಹಾಗೂ ಪದವಿಪೂರ್ವ ಪರೀಕ್ಷಾ ಮಂಡಳಿ ವಿಲೀನಗೊಂಡು ಇನ್ಮುಂದೆ ಒಂದೇ ಮಂಡಳಿಯಿಂದ ಪರೀಕ್ಷೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.