Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಪಾರದರ್ಶಕವಾಗಿ ಮಳೆ ಹಾನಿ ಪರಿಹಾರ ವಿತರಿಸುವಂತೆ ಸಿಎಂ ಖಡಕ್ ಸೂಚನೆ

ಪಾರದರ್ಶಕವಾಗಿ ಮಳೆ ಹಾನಿ ಪರಿಹಾರ ವಿತರಿಸುವಂತೆ ಸಿಎಂ ಖಡಕ್ ಸೂಚನೆ
ಬೆಂಗಳೂರು , ಬುಧವಾರ, 7 ಸೆಪ್ಟಂಬರ್ 2022 (17:07 IST)
ರಾಜ್ಯ ಸರ್ಕಾರ ಅತ್ಯಂತ ನಿಖರ ಹಾಗೂ ಪಾರದರ್ಶಕವಾಗಿ ಮಳೆ ಹಾನಿಯ ಅಂದಾಜುಪಟ್ಟಿ ಸಿದ್ಧಪಡಿಸಿ, ಪ್ರಸ್ತಾವನೆ ಸಲ್ಲಿಸಿದ್ದು, ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ನ್ಯಾಯಯುತ ಪರಿಹಾರ ಒದಗಿಸಲು ಶಿಫಾರಸು ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ರಾಜ್ಯದ ಪ್ರವಾಹ ಪರಿಸ್ಥಿತಿ ಅಧ್ಯಯನಕ್ಕೆ ಆಗಮಿಸಿರುವ ಕೇಂದ್ರ ಸರ್ಕಾರದ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಆಶಿಶ್ ಕುಮಾರ್ ನೇತೃತ್ವದ ಕೇಂದ್ರ ಅಧ್ಯಯನ ತಂಡದೊಂದಿಗೆ ಸಭೆ ನಡೆಸಿ, ರಾಜ್ಯದಲ್ಲಿ ಪ್ರವಾಹದಿಂದ ಜುಲೈ, ಆಗಸ್ಟ್ ಹಾಗೂ ಈ ತಿಂಗಳು ಸಂಭವಿಸಿದ ಹಾನಿಯ ಕುರಿತು ಚರ್ಚಿಸಿದರು. ರಾಜ್ಯದಲ್ಲಿ ಜುಲೈ ಹಾಗೂ ಆಗಸ್ಟ್ ತಿಂಗಳಲ್ಲಿ ಸಂಭವಿಸಿದ ಪ್ರವಾಹ ಪರಿಸ್ಥಿತಿಯಿಂದ ಸಂಭವಿಸಿದ ಹಾನಿಯ ಕುರಿತು ಹಾಗೂ ರಾಜ್ಯ ಸರ್ಕಾರ ಕೈಗೊಂಡ ಪರಿಹಾರ ಕ್ರಮಗಳ ಕುರಿತು ಸಭೆಯಲ್ಲಿ ವಿವರವಾದ ಮಾಹಿತಿ ಒದಗಿಸಲಾಯಿತು. ತಂಡವು ಚಿತ್ರದುರ್ಗ, ಹಾಸನ, ಚಿಕ್ಕಮಗಳೂರು, ಹಾವೇರಿ, ಧಾರವಾಡ, ಗದಗ, ಬೀದರ್, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳಿಗೆ ಭೇಟಿ ನೀಡುವ ಕಾರ್ಯಕ್ರಮ ರೂಪಿಸಲಾಗಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ಅಮೃತಾ ಜ್ಯೋತಿ ಯೋಜನೆ ನಿಯಮ ಸಡಿಲಿಕೆ ಮಾಡುತ್ತೇವೆ ಸಚಿವ ಸುನಿಲ್ ಕುಮಾರ್ ಸ್ಪಷ್ಟನೆ