ಬೆಂಗಳೂರು : 15 ವರ್ಷಗಳ ಬಳಿಕ ಕರ್ನಾಟಕ ಹಾಗೂ ಆಂಧ್ರಪ್ರದೇಶ ನಡುವೆ ಅಂತರ ರಾಜ್ಯ ಸಾರಿಗೆ ಸಂಚಾರಕ್ಕೆ ಕೆಎಸ್ಆರ್ಟಿಸಿ ಒಪ್ಪಂದ ಮಾಡಿಕೊಳ್ಳಲಾಗಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಗಳು ಆಂಧ್ರಪ್ರದೇಶದ ಮತ್ತಷ್ಟು ಭಾಗಗಳಿಗೆ ಕರ್ನಾಟಕದಿಂದ ಸಂಚಾರ ಆರಂಭಿಸಲಿದ್ದಾವೆ. ಕರ್ನಾಟಕ ಹಾಗೂ ಆಂಧ್ರ ಪ್ರದೇಶ ರಾಜ್ಯಗಳ ನಡುವೆ ಇದುವರೆಗೆ ಒಂದು ಪ್ರಧಾನ ಅಂತರರಾಜ್ಯ ಸಾರಿಗೆ ಒಪ್ಪಂದ ಹಾಗೂ 8 ಪೂರಕ ಅಂತರರಾಜ್ಯ ಸಾರಿಗೆ ಒಪ್ಪಂದಗಳು ಏರ್ಪಟ್ಟಿತ್ತು.
ಕರ್ನಾಟಕ ಹಾಗೂ ಆಂಧ್ರ ಪ್ರದೇಶ ರಾಜ್ಯಗಳ ನಡುವೆ 2008ರಲ್ಲಿ ಅಂತರರಾಜ್ಯ ಸಾರಿಗೆ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಇದೀಗ ಎರಡೂ ರಾಜ್ಯಗಳ ನಡುವೆ ಪ್ರಯಾಣಿಸುವ ಸಾರ್ವಜನಿಕ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳವಾಗಿದೆ.