ಬೆಂಗಳೂರು : ಜಿಂದಾಲ್ ಭೂಮಿ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ನಡುವೆ ಟ್ವೀಟ್ ವಾರ್ ನಡೆದಿದೆ.
ಜಿಂದಾಲ್ ಭೂಮಿ ಮಾರಾಟ ಮಾಡುವ ವಿಚಾರದಲ್ಲಿ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ, ಕೋ-ಜಾ’ ಸರ್ಕಾರ ಜಿಂದಾಲ್‍ಗೆ ಪುಡಿಗಾಸಿಗೆ ಬೆಲೆ ಬಾಳುವ ಭೂಮಿ ಮಾರಾಟ ಮಾಡುತ್ತಿದೆ. ಈ ಕುರಿತು ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಮೌನ ವಹಿಸಿದ್ದಾರೆ. ನಿಮ್ಮ ಮೌನ ಯಾಕೆ ಅಂತ ರಾಜ್ಯ ಕೇಳುತ್ತಿದೆ ಎಂದು ವ್ಯಂಗ್ಯ ಮಾಡಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ , ಶೋಭಾ ಅವರೇ, ನಿಮ್ಮ ಯೋಜನೆ ರೂಪಿಸುವ ಕೌಶಲ್ಯ ನಿಮ್ಮ ಪದ ಬಳಕೆಯಷ್ಟೇ ಚೆನ್ನಾಗಿರುತ್ತಿದ್ರೆ, ನೀವು ಸಹ `ಮೈತ್ರಿ’ ಯೋಜನೆ ಜಾರಿ ಮಾಡುತ್ತಿದ್ದೀರಿ. ಅಸಾಂವಿಧಾನಿಕ ಪದಗಳ ಬಳಕೆಯನ್ನಾದ್ರೂ ಕಡಿಮೆ ಮಾಡಲು ಪ್ರಯತ್ನಿಸಿ. ನೀವು ಬಳಸುವ ಪದಗಳು ಒಂದು ವರ್ಗಕ್ಕೆ ನೋವುಂಟು ಮಾಡಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.