Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರಿನಲ್ಲಿ ನಡೆದಿದ್ದ ಶಂಕರ್ ಕುಟುಂಬದ ಐವರ ಸಾವಿನ ಪ್ರಕರಣದ ಬಗ್ಗೆ ಮಹತ್ವದ ಸುಳಿವು ಸಿಕ್ಕಿದೆ. ಪ್ರಕರಣದಲ್ಲಿ ಸಾವನ್ನಪ್ಪಿದಂತ ಮಗು, ಹಸಿವಿನಿಂದ ಸಾವನ್ನಪ್ಪಿಲ್ಲ. ಬದಲಾಗಿ ಕೊಲೆ ಮಾಡಲಾಗಿರೋದಾಗಿ ಪರೀಕ್ಷಾ ವರದಿಯಿಂದ ತಿಳಿದು ಬಂದಿದೆ.ರಾಜ್ಯವೇ ಬೆಚ್ಚಿ ಬೀಳುವಂತ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ನಡೆದಿತ್ತು. ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣಾಗಿದ್ದರು.
ಈ ಪ್ರಕರಣದಲ್ಲಿ ಪುಟ್ಟ ಮಗು ಕೂಡ ಸಾವನ್ನಪ್ಪಿತ್ತು. ಮಗು ಸಾವನ್ನಪ್ಪಿದ್ದರ ಬಗ್ಗೆ ಅನುಮಾನಗೊಂಡ ಪೊಲೀಸರು, ಮಗುವಿನ ಸಾವಿನ ತನಿಖೆಗೆ ಎಫ್ಎಸ್ಐಎಲ್ ಪರೀಕ್ಷೆಗಾಗಿ ಕಳುಹಿಸಿ ಕೊಡಲಾಗಿತ್ತು. ಇದೀಗ ಎಫ್ಎಸ್ಎಲ್ ವರದಿ ಬಂದಿದ್ದು. ಮಗು ಸಾವನ್ನಪ್ಪಿರೋದು ಹಸಿವಿನಿಂದ ಅಲ್ಲ, ಬದಲಾಗಿ ಕೊಲೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಈ ಸಂಬಂಧ ಪೊಲೀಸರು ಕೋರ್ಟ್ ಗೆ ವರದಿ ಸಲ್ಲಿಸಿದ್ದಾರೆ.