Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ಹಿಂದೂಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಗಂಗಾವತಿ ಶಾಸಕ ಇಕ್ಬಾಲ್ ಅನ್ಸಾರಿಗೆ ಕೊಲೆ ಬೆದರಿಕೆ ಹಾಕಿದ್ದು ನಾನೇ ಎಂದು ಭೂಗತ ಪಾತಕಿ ರವಿ ಪೂಜಾರಿ ಒಪ್ಪಿಕೊಂಡಿದ್ದಾನೆ.
ಇತ್ತೀಚೆಗೆ ಶಾಸಕ ಅನ್ಸಾರಿ ಕಾರ್ಯಕ್ರಮವೊಂದರಲ್ಲಿ ಕೆಲವರು ರಾಮನ ಹೆಸರಿನಲ್ಲಿ ಕೊಲೆ, ಸುಲಿಗೆ ಮಾಡ್ತಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದಾದ ಬೆನ್ನಲ್ಲೇ ಅವರಿಗೆ ಕೊಲೆ ಬೆದರಿಕೆ ಬಂದಿತ್ತು.
ಇದರ ಬಗ್ಗೆ ಪ್ರತಿಕ್ರಿಯಿಸಿರುವ ಭೂಗತ ದೊರೆ ರವಿ ಪೂಜಾರಿ, ಗಂಗಾವತಿ ಶಾಸಕ ಒಬ್ಬ ಹಿಂದೂ ವಿರೋಧಿ. ಅದೇ ಕಾರಣಕ್ಕೆ ಅವರ ವಿರುದ್ಧ ಕೊಲೆ ಬೆದರಿಕೆ ಹಾಕಿದ್ದೇನೆ. ನಾನೇ ಇದನ್ನು ಮಾಡಿದ್ದೇನೆ ಎಂದು ಒಪ್ಪಿಕೊಂಡಿದ್ದಾನೆ. ಇದರೊಂದಿಗೆ ಶಾಸಕರ ಕೊಲೆ ಬೆದರಿಕೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ