ರಾಜ್ಯದಲ್ಲಿ ಮಂಗಳವಾರದಿಂದ ಎರಡು ದಿನ ಶಾಹೀನ್ ಚಂಡಮಾರುತ ಪ್ರಭಾವದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವುದರಿಂದ ಅ. 6ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ರಾಜ್ಯದಲ್ಲಿ 4 ತಿಂಗಳ ಮುಂಗಾರು ಸೆ. 30ಕ್ಕೆ ಅಂತ್ಯವಾಗಿದೆ. ಕರ್ನಾಟಕದಲ್ಲಿ ಈ ವರ್ಷ 852 ಮಿ.ಮೀ. ಮಳೆಯಾಗಬೇಕಿತ್ತು ಆದರೆ, 787 ಮಿ.ಮೀ. ಮಳೆ ದಾಖಲಾಗಿದೆ. ಕಲಬುರಗಿ ಯಲ್ಲಿ ಭಾರೀ ಮಳೆಯಿಂದ ಅಪಾರ ಬೆಳೆಗಳು ನಾಶವಾಗಿವೆ.