ನೈರುತ್ಯ ಬಂಗಾಳ ಉಪಸಾಗರದ ತಮಿಳುನಾಡಿನ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರ ಪ್ರಭಾವದಿಂದ ಆ.26 ಮತ್ತು 27ರಂದು ಕರಾವಳಿ ಮತ್ತು ಒಳನಾಡಿನಲ್ಲಿ ಗುಡುಗು ಸಹಿತ ವ್ಯಾಪ
ಕ ಮಳೆಯಾಗುವ ಸಾಧ್ಯತೆಯಿದೆ.
ಆ.24ರಿಂದ 25ರವರೆಗೆ ಕರಾವಳಿ ಮತ್ತು ಒಳನಾಡಿನ ಎಲ್ಲ ಸ್ಥಳಗಳಲ್ಲಿ ವ್ಯಾಾಪಕ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಆ.24 ಮತ್ತು 25ರಂದು ಕೆಲವು ಕಡೆ ಹಗುರದಿಂದ ಸಾಧಾರಣವಾಗಿ ಮಳೆಯಾಗುವ ನಿರೀಕ್ಷೆಯಿದೆ. ಆ.26 ಮತ್ತು 27ರಂದು ಬಹುತೇಕ ಎಲ್ಲ ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ವರೆಗೆ ಮಳೆಯಾಗುವ ಹೆಚ್ಚಿನ ನಿರೀಕ್ಷೆಯಿದೆ. ಗರಿಷ್ಠ ಉಷ್ಣಾಂಶ 28 ಹಾಗೂ ಕನಿಷ್ಠ ಉಷ್ಣಾಂಶ 20 ಡಿ.ಸೆ. ಇರಲಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.
ರಾಜ್ಯಾದ್ಯಂತ ಸೋಮವಾರ ನೈರುತ್ಯ ಮುಂಗಾರು ಚುರುಕಾಗಿತ್ತು. ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದ್ದು, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಬಹುತೇಕ ಎಲ್ಲ ಸ್ಥಳಗಳಲ್ಲಿ ಮಳೆಯಾಗಿದೆ. ಮುಖ್ಯವಾಗಿ ಬಾಗಲಕೋಟೆಯಲ್ಲಿ 7 ಸೆಂ.ಮೀ., ಗದಗ ಜಿಲ್ಲೆಯ ನರಗುಂದದಲ್ಲಿ 6 ಸೆಂ.ಮೀ. ಹಾಗೂ ದಾವಣಗೆರೆಯಲ್ಲಿ 5 ಸೆಂ.ಮೀ. ಮಳೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.