ಮಂಗಳೂರು: ಎರಡು ದಿನಗಳಿಂದ ಬಿಡುವು ಪಡೆದಿದ್ದ ವರುಣ ಕರಾವಳಿ ಜನರಿಗೆ ಮತ್ತೆ ದರ್ಶನ ಭಾಗ್ಯ ಕೊಡಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ಎರಡು ದಿನಗಳಿಂದ ಕರಾವಳಿ ಭಾಗದಲ್ಲಿ ಮಳೆಗೆ ಬಿಡುವು ಸಿಕ್ಕಿತ್ತು. ಇದೀಗ ಮತ್ತೆ ಮುಂದಿನ ಎರಡು ದಿನ ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಹೀಗಾಗಿ ಎಚ್ಚರಿಕೆ ವಹಿಸುವಂತೆ ಜನರಿಗೆ ಜಿಲ್ಲಾಡಳಿತ ಮುನ್ಸೂಚನೆ ನೀಡಿದೆ. ಕಳೆದ ವಾರ ಸುರಿದ ಮಳೆಗೆ ಚಾರ್ಮಾಡಿ ಘಾಟಿಯಲ್ಲಿ ಗುಡ್ಡ ಕುಸಿದು ಸಂಚಾರ ಬಂದ್ ಆಗಿತ್ತು. ಈ ಮಳೆಗೆ ಇನ್ನೇನು ಅವಾಂತರ ಕಾದಿದೆಯೋ ಎಂಬ ಆತಂಕದಲ್ಲಿ ಜನತೆ ಇದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.