Publish Date: Sat, 09 Jun 2018 (09:41 IST)
Updated Date: Sat, 09 Jun 2018 (09:43 IST)
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಮತ್ತೆ ವರುಣ ಅಬ್ಬರ ಮುಂದುವರಿದಿದ್ದು, ಕಳೆದೆರಡು ದಿನಗಳಿಂದ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕಳೆದೆರಡು ದಿನಗಳಿಂದ ಭಾರೀ ಮೋಡ ಕವಿದ ವಾತಾವರಣದ ಜತೆಗೆ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ಮುನ್ನಚ್ಚರಿಕೆಯ ಕ್ರಮವಾಗಿ ಜಿಲ್ಲಾಧಿಕಾರಿಗಳು ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದ್ದಾರೆ.
ಇನ್ನೊಂದೆಡೆ ಎರಡು ದಿನಗಳ ಕಾಲ ಧಾರಾಕಾರ ಮಳೆ, ಗಾಳಿ ಬರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ ಹಿನ್ನಲೆಯಲ್ಲಿ ಮೀನುಗಾರರಿಗೆ ಕಡಲಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ. ಮೊನ್ನೆಯಷ್ಟೇ ಮಂಗಳೂರು ಮಳೆಗೆ ಸಂಪೂರ್ಣ ಮುಳುಗಡೆಯಾಗಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.