Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಕೊಡಗು ಜಿಲ್ಲೆಯಲ್ಲಿ ಬುಧವಾರ 2 ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿದೆ.
ಕಳೆದ 24ಗಂಟೆಗಳಲ್ಲಿ ಸೋಮವಾರಪೇಟೆ ತಾಲೂಕಿನಲ್ಲಿ ಎರಡು ಪ್ರಕರಣ ದೃಢಪಟ್ಟಿದ್ದು, ಏಳು ಮಂದಿ ಸೋಂಕಿನದ ಮುಕ್ತರಾಗಿದ್ದಾರೆ.
ಇದರೊಂದಿಗೆ ಜಿಲ್ಲೆಯಲ್ಲಿನ ಕೋವಿಡ್ ಸಕಿತರ ಸಂಖ್ಯೆ 47,667ರಷ್ಟಾಗಿದ್ದು, ಗುಣಮುಖರಾದವರ ಸಂಖ್ಯೆ 47,175ರಷ್ಟಾಗಿದೆ. ಸತ್ತವರ ಸಂಖ್ಯೆ 451ರಷ್ಟಿದೆ.
ಜಿಲ್ಲೆಯಲ್ಲಿ ಪ್ರಸಕ್ತ 41 ಸಕ್ರಿಯ ಪ್ರಕರಣಗಳಿದ್ದು, ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 13 ಮತ್ತು ಪಾಸಿಟಿವಿಟಿ ಪ್ರಮಾಣ ಶೇ. 0.63ರಷ್ಟಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.