Publish Date: Wed, 16 Aug 2023 (20:16 IST)
Updated Date: Wed, 16 Aug 2023 (20:19 IST)
ಎರಡು ಬೈಕ್ಗಳು ಡಿಕ್ಕಿಯಾಗಿ ಬೆಂಗಳೂರಿನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಕೆಂಗೇರಿ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನರಸಪ್ಪ ಹಾಗೂ ರಕ್ಷಾ ಮೃತ ದುರ್ದೈವಿಗಳಾಗಿದ್ದಾರೆ.. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಕೆಂಗೇರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿನ್ನೆ ರಾತ್ರಿ 11.40ರ ಸುಮಾರಿಗೆ ರಕ್ಷಾ, ಚಂದನ್ ಜತೆಯಾಗಿ ಪಲ್ಸರ್ ಬೈಕ್ನಲ್ಲಿ ಸ್ಪೀಡಾಗಿ ಹೋಗುತ್ತಿದ್ದರು. ಮಾರುತಿ ನಗರ ಮುಖ್ಯ ರಸ್ತೆಯಲ್ಲಿ ಕೇಲ್‌ಇ ಕಾಲೇಜು ಕಡೆ ಸ್ಪೀಡಾಗಿ ಹೋಗ್ತಿದ್ದರು, ಈ ವೇಳೆ ಅದೇ ರಸ್ತೆಯಲ್ಲಿ ಬರ್ತಿದ್ದ ನರಸಪ್ಪ ಬೈಕ್ಗೆ ಚಂದನ್ ಬೈಕ್ ಡಿಕ್ಕಿ ಹೊಡೆದಿದ್ದಾನೆ. ಈ ಭೀಕರ ಅಪಘಾತದ ಪರಿಣಾಮ ನರಸಪ್ಪಗೆ ಗಂಭೀರ ಗಾಯವಾಗಿ ಘಟನಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಚಂದನ್ ಮತ್ತು ರಕ್ಷಾಗೂ ಗಂಭೀರ ಗಾಯಗಳಾಗಿತ್ತು. ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ರಕ್ಷಾ ಅಸುನೀಗಿದ್ದಳು. ಸದ್ಯ ಗಾಯಾಳು ಚಂದನ್ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.