ಮನೆ ಎದುರು ಹಾಗೂ ಪಾರ್ಕಿಂಗ್ ಸ್ಥಳಗಳಲ್ಲಿ ನಿಲುಗಡೆ ಮಾಡಿದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಚಾಲಾಕಿ ಖದೀಮನನ್ನು ಕೆಂಗೇರಿ ಠಾಣೆ ಪೆÇಲೀಸರು ಬಂಧಿಸಿದ್ದಾರೆ.
ಕೋಲಾರ ಚಿಂತಾಮಣಿ ಮೂಲದ ವೆಂಕಟಸ್ವಾಮಿ (38) ಬಂಧಿತ. ಆರೋಪಿ ವಿಚಾರಣೆ ವೇಳೆ ನೀಡಿದ ಮಾಹಿತಿ ಮೇರೆಗೆ 6.70 ಲಕ್ಷ ರೂ. ಮೌಲ್ಯದ 12 ದ್ವಿಚಕ್ರವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೆÇಲೀಸರು ತಿಳಿಸಿದರು.
ಆರೋಪಿಯು ಇತ್ತೀಚೆಗೆ ಕೆಂಗೇರಿ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನದಲ್ಲಿ ಅನುಮಾನಾಸ್ಪದವಾಗಿ ಓಡಾಡುವಾಗ ಪೆÇಲೀಸರು ಗಮನಿಸಿ, ವಶಕ್ಕೆ ಪಡೆದು ಪ್ರಶ್ನಿಸಿದಾಗ ದುಷ್ಕøತ್ಯಗಳು ಬೆಳಕಿಗೆ ಬಂದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆರೋಪಿಯು ರಾತ್ರಿ ವೇಳೆ ಮನೆ ಎದುರು ನಿಲುಗಡೆ ಮಾಡಿದ ದ್ವಿಚಕ್ರವಾಹನಗಳನ್ನು ಕದ್ದು ಪರಾರಿಯಾಗುತ್ತಿದ್ದ. ಬಳಿಕ ಆಂಧ್ರಗಡಿ ಭಾಗಗಳಲ್ಲಿ ಗಿರಾಕಿಗಳನ್ನು ಹುಡುಕಿ 5-10 ಸಾವಿರ ರೂ.ಗೆ ದ್ವಿಚಕ್ರವಾಹನ ಮಾರಾಟ ಮಾಡಿ ಹಣ ಪಡೆಯುತ್ತಿದ್ದ. ಬಳಿಕ ಆ ಹಣವನ್ನು ಮೋಜು-ಮಸ್ತಿ ಮಾಡುವುದಕ್ಕಾಗಿ ವ್ಯಯಿಸುತ್ತಿದ್ದ. ಆರೋಪಿಯ ವಿರುದ್ಧ ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ನಾನಾ ಜಿಲ್ಲೆಗಳಲ್ಲಿ 70 ಅಧಿಕ ಕಳವು ಪ್ರಕರಣ ದಾಖಲಾಗಿವೆ. ಹಲವು ಪ್ರಕರಣಗಳಲ್ಲಿ ಜೈಲು ಸೇರಿದ್ದ ಆರೋಪಿ, ಜಾಮೀನು ಪಡೆದು ಹೊರಬಂದ ಬಳಿಕವೂ ತನ್ನ ಹಳೇ ಚಾಳಿ ಮುಂದುವರಿಸಿದ್ದ ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ ಪೆÇಲೀಸರು ತಿಳಿಸಿದರು.
ವೆಂಕಟಸ್ವಾಮಿ ಬಂಧನದಿಂದ ಕೆಂಗೇರಿ, ಬ್ಯಾಟರಾಯನಪುರ, ಕೆ.ಆರ್.ಪುರ, ಸಂಪಿಗೆಹಳ್ಳಿ, ಯಲಹಂಕ, ಹೆಣ್ಣೂರು, ಕಾಡುಗೋಡಿ ಮತ್ತು ಜ್ಞಾನಭಾರತಿ ಪೆÇಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 12 ದ್ವಿಚಕ್ರವಾಹನ ಕಳವು ಪ್ರಕರಣಗಳು ಪತ್ತೆಯಾಗಿವೆ ಎಂದು ತಿಳಿಸಿದ್ದಾರೆ.