Publish Date: Thu, 10 Nov 2022 (08:31 IST)
Updated Date: Thu, 10 Nov 2022 (09:22 IST)
ಹಾವೇರಿ : ಜಿಲ್ಲೆಯ ಹಿರೇಕೆರೂರು ತಾಲೂಕಿನಲ್ಲಿನ ರಾಜಕೀಯ ಬೆಳವಣಿಗೆಗಳಿಂದ ಬೇಸತ್ತು ಬಿಜೆಪಿಗೆ ಮಾಜಿ ಶಾಸಕ ಯು.ಬಿ.ಬಣಕಾರ ಗುಡ್ ಬೈ ಹೇಳಿದ್ದಾರೆ.
ಬಿಜೆಪಿಯ ಪ್ರಾಥಮಿಕ ಸದಸ್ಯತ್ವ, ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನ ಹಾಗೂ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಆಪ್ತರಾಗಿದ್ದ ಯು.ಬಿ.ಬಣಕಾರ ಈಗ ರಾಜೀನಾಮೆ ನೀಡಿದ್ದಾರೆ.