ರಾಜಕೀಯ ಬಿಕ್ಕಟ್ಟು ಕೊನೆಗೊಂಡ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಸಿಎಂ ಆಗಿ ಶಿವಸೇನೆಯ ಉದ್ಧವ್ ಠಾಕ್ರೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.
ದಿಢೀರ್ ಆಗಿ ಬಿಜೆಪಿಯ ದೇವೇಂದ್ರ ಫಡ್ನವೀಸ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಷ್ಟೇ ವೇಗವಾಗಿ ರಾಜೀನಾಮೆ ನೀಡಿದ್ದರು.
ಈಗ ಶಿವಸೇನೆ, ಎನ್ ಸಿಪಿ ಹಾಗೂ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿವೆ. ಮಹಾರಾಷ್ಟ್ರ ವಿಕಾಸ ಅಘಾಡಿ ಹೆಸರಿನಲ್ಲಿ ಆಡಳಿತ ನಡೆಸೋಕೆ ಅಣಿಯಾಗಿವೆ.
ಹಂಗಾಮಿ ಸ್ಪೀಕರ್ ಕಾಳಿದಾಸ ಕೊಳಂಬ್ಕರ್ ಸಮ್ಮುಖದಲ್ಲಿ ನೂತನ ಶಾಸಕರು ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದು, ಸಿಎಂ ಆಗಿ ಉದ್ಧವ್ ಠಾಕ್ರೆ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.