ಉಡುಪಿ : ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಅಪೂರ್ವ ಧಾರ್ಮಿಕ ಕಾರ್ಯಕ್ರಮವನ್ನು ನಡೆಯುತ್ತಿದೆ. 15 ದಿನಗಳ ನಿರಂತರ ಕಾರ್ಯಕ್ರಮದಲ್ಲಿ 2 ಲಕ್ಷ ಭಕ್ತರು ಭಾಗಿಯಾಗಲಿದ್ದಾರೆ. ಗಂಗೆಗೆ ನಡೆಯುವ ಮಾದರಿಯ ಆರತಿ ಕೈಲಾಸವಾಸಿ ಶಿವನಿಗೆ ಆಗಲಿದೆ.
ಇತಿಹಾಸದಲ್ಲೇ ಮೊದಲ ಬಾರಿಗೆ ಉಡುಪಿಯಲ್ಲಿ ಅತಿ ರುದ್ರ ಮಹಾಯಾಗ ನಡೆಯುತ್ತಿದೆ. ಮಣಿಪಾಲ ಸಮೀಪದ ಸರಳಬೆಟ್ಟು ಶ್ರೀ ಉಮಾಮಹೇಶ್ವರಿ ದೇವಸ್ಥಾನ ದಲ್ಲಿ ಈ ಧಾರ್ಮಿಕ ಕಾರ್ಯಕ್ರಮ ಆರಂಭವಾಗಿದೆ.
ಬರೋಬ್ಬರಿ 15 ದಿನಗಳ ಕಾಲ ನಡೆಯುವ ಅತಿ ರುದ್ರ ಮಹಾಯಾಗದಲ್ಲಿ 150 ಜನ ಋತ್ವಿಜರು ರುದ್ರಪಠಣ, ಯಾಗ- ಹೋಮದಲ್ಲಿ ಭಾಗಿಯಾಗಿದ್ದಾರೆ.