Publish Date: Tue, 18 Apr 2023 (21:05 IST)
Updated Date: Tue, 18 Apr 2023 (20:04 IST)
ಮಾಜಿ ಸಚಿವೆ ಉಮಾಶ್ರೀ ಅವರಿಗೆ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಉಮಾಶ್ರೀ ಬೆಂಬಲಿಗರು ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಬಾಗಲಕೋಟೆಯ ತೇರದಾಳ ಮತಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಉಮಾಶ್ರೀಗೆ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ್ದು, ಸಿದ್ದು ಕೊಣ್ಣೂರಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದೆ. ಹೀಗಾಗಿ ಉಮಾಶ್ರೀ ಬೆಂಬಲಿಗರು ಕಣ್ಣೀರು ಹಾಕಿ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ