Publish Date: Tue, 05 Mar 2019 (10:55 IST)
Updated Date: Tue, 05 Mar 2019 (10:57 IST)
ಹುಬ್ಬಳ್ಳಿ : ಉಮೇಶ್ ಜಾಧವ್ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಉಮೇಶ್ ಜಾಧವ್ ರಾಜೀನಾಮೆ ಅಂಗೀಕಾರ ಆಗೋದು ಕಷ್ಟ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಅವರು ಹೇಳಿದ್ದಾರೆ.
ಉಮೇಶ್ ಜಾಧವ್ ವಿರುದ್ಧ ಅನರ್ಹತೆ ಅಸ್ತ್ರದ ಸುಳಿವು ನೀಡಿದ ಸಿದ್ಧರಾಮಯ್ಯ ಅವರು, ‘ಉಮೇಶ್ ಜಾಧವ್ ಕಾಂಗ್ರೆಸ್ ಪಕ್ಷದಿಂದ ಗೆದ್ದಿದ್ದಾರೆ. ಆದರೆ ಈಗ ಆಪರೇಷನ್ ಕಮಲಕ್ಕೆ ಬಲಿಯಾಗಿದ್ದಾರೆ. ಪಕ್ಷಾಂತರ ನಿಷೇಧ ಕಾಯ್ದೆಯಡಿ ಕ್ರಮ ಜರುಗಿಸಲು ದೂರು ನೀಡಿರುವುದಾಗಿ’ ಹೇಳಿದ್ದಾರೆ.
ಹಾಗೇ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಸುಮಲತಾ ಸ್ಪರ್ಧೆ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಅವರು,’ಮಂಡ್ಯ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟು ಕೊಡುವ ನಿರ್ಧಾರವಾಗಿದೆ. ಪಕ್ಷೇತರವಾಗಿ ನಿಲ್ಲುವುದು ಸುಮಲತಾ ಅವರಿಗೆ ಬಿಟ್ಟ ವಿಚಾರ. ಸ್ಥಾನ ಹಂಚಕೆಯ ಬಗ್ಗೆ ಚರ್ಚೆ ನಡೆಯುತ್ತಿದೆ. 3-4 ದಿನಗಳಲ್ಲಿ ನಿರ್ಧಾರವಾಗಲಿದೆ’ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.