Webdunia - Bharat's app for daily news and videos

Install App

ಬಿಜೆಪಿಯ ಸೋಲು ಅರಗಿಸಿಕೊಳ್ಳಲಾಗದೆ ಟಿವಿಯನ್ನೇ ಧ್ವಂಸ ಮಾಡಿದ ಬಿಜೆಪಿ ನಿಷ್ಠಾವಂತ ಕಾರ್ಯಕರ್ತ

Sampriya
ಶನಿವಾರ, 23 ನವೆಂಬರ್ 2024 (18:14 IST)
Photo Courtesy X
ಬೆಂಗಳೂರು: ರಾಜ್ಯದ ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ಉಪಚುನಾವಣೆಗಳಲ್ಲಿ ಬಿಜೆಪಿ ಸೋಲಿನಿಂದ ಹತಾಶೆಗೊಂಡ ವಿಜಯಪುರ ಜಿಲ್ಲೆಯ ಬಿಜೆಪಿ ಕಾರ್ಯಕರ್ತನೊಬ್ಬರು ಮನೆಯ ಟಿವಿಯನ್ನು ಧ್ವಂಸ ಮಾಡಿದ್ಧಾರೆ. ಈ ಕುರಿತ ವಿಡಿಯೊ ವೈರಲ್‌ ಆಗಿದೆ.

ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾಂವಿ ಉಪ ಚುನಾವಣಾ ಫಲಿತಾಂಶದಲ್ಲಿ ಮತ ಎಣಿಕೆ ಭರದಿಂದ ಸಾಗುತ್ತಿದ್ದ ವೇಳೆ ಮೂರಕ್ಕೆ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವಿನತ್ತ ಸಾಗಿದ್ದರು. ಈ ವೇಳೆ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುವುದನ್ನು ನೋಡಲಾಗದೇ ಬಿಜೆಪಿ ಕಾರ್ಯಕರ್ತ ಕಾರ್ಯಕರ್ತ ವೀರಭದ್ರಪ್ಪ ಟಿವಿಯನ್ನು ಒಡೆದುಹಾಕಿದ್ದಾರೆ.

ಮಧ್ಯಾಹ್ನ 12 ಗಂಟೆ ವೇಳೆಗೆ ಎಂಟರಿಂದ 10ನೇ ಸುತ್ತಿನ ಮತ ಎಣಿಕೆಯಿಂದ ಇವರು ಹಿನ್ನಡೆ ಅನುಭವಿಸಿ ಕಾಂಗ್ರೆಸ್ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದರು. ಮೂರಕ್ಕೆ ಮುರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ ಬೆನ್ನಲ್ಲಿಯೇ ತಾವು ನೋಡುತ್ತಿದ್ದ ಟಿವಿಯ ಮೇಲೆ ಪಕ್ಕದಲ್ಲಿದ್ದ ಚೇರ್ ತೆಗೆದುಕೊಂಡು ಎಸೆದಿದ್ದಾರೆ. ಜೊತೆಗೆ, ಟಿವಿಯನ್ನು ತೆಗೆದುಕೊಂಡು ಬಂದು ಮನೆಯ ಅಂಗಳದಲ್ಲಿ ಎಸೆದು ತಮ್ಮ ಆಕ್ರೋಶ ಹೊರ ಹಾಕಿದ್ದಾರೆ.

ಈ ಘಟನೆ ವಿಜಯಪುರ ಜಿಲ್ಲೆ ಕೋಲ್ಹಾರ ಪಟ್ಟಣದಲ್ಲಿ ನಡೆದಿದೆ. ಬಿಜೆಪಿ ನಿಷ್ಠಾವಂತ ಕಾರ್ಯಕರ್ತ ವೀರಭದ್ರಪ್ಪ ಭಾಗಿ ಟಿವಿ ಒಡೆದು ಆಕ್ರೋಶ ವ್ಯಕ್ತಪಡಿಸಿದ ವ್ಯಕ್ತಿ ಆಗಿದ್ದಾರೆ. ಬಿಜೆಪಿ ನಾಯಕರಲ್ಲಿ ಒಗ್ಗಟ್ಟಿಲ್ಲದೇ ಭಿನ್ನಮತ ಇರುವುದಕ್ಕೆ ಇಲ್ಲಿ ಸೋಲಾಗಿದೆ. ಬಿಜೆಪಿ ನಾಯಕರಲ್ಲಿ ಒಗ್ಗಟಿನ ಕೊರತೆಯಿಂದ ಹೀನಾಯ ಸೋಲಿಗೆ ಕಾರಣ ಎಂದು ಕಾರ್ಯಕರ್ತ ವೀರಭದ್ರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ಮುಂದಿನ ಸುದ್ದಿ
Show comments