Publish Date: Fri, 23 Dec 2022 (09:42 IST)
Updated Date: Thu, 22 Dec 2022 (23:24 IST)
ಬೆಳಗಾವಿ : ಮಹಾರಾಷ್ಟ್ರದ ಗಡಿ ವಿವಾದ ಕ್ಯಾತೆ, ಪುಂಡಾಟಿಕೆ ಖಂಡಿಸಿ ರಾಜ್ಯ ವಿಧಾನಸಭೆಯಲ್ಲಿ ಸರ್ವಾನುಮತದಿಂದ ಖಂಡನಾ ನಿರ್ಣಯ ಅಂಗೀಕರಿಸಲಾಗಿದೆ.
ಮಹಾರಾಷ್ಟ್ರದ ಕ್ಯಾತೆ, ಸಚಿವ ಸಂಸದನ ಪುಂಡಾಟದ ಹೇಳಿಕೆಯ ವಿರುದ್ಧ ವಿಧಾನಸಭೆಯಲ್ಲಿ ಆಕ್ರೋಶ ವ್ಯಕ್ತವಾಯ್ತು. ವಿಧಾನಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿದ ಖಂಡನಾ ನಿರ್ಣಯ ಸರ್ವಾನುಮತದಿಂದ ಅಂಗೀಕಾರವಾಯಿತು.
ಕರ್ನಾಟಕದ ನೆಲ, ಜಲದ ಹಿತ ಕಾಪಾಡಲು ಮತ್ತು ಕಾನೂನಿನ ಹೋರಾಟದ ಸಮರ್ಥನೆ ಮಾಡಲು, ಈ ಮೂಲಕ ರಾಜ್ಯ ಸರ್ಕಾರ ತನ್ನ ಬದ್ಧತೆಯನ್ನು ಪ್ರದರ್ಶಿಸಿದೆ. ಇತ್ತೀಚಿಗೆ ಈ ವಿಷಯದ ಬಗ್ಗೆ ಮಹಾರಾಷ್ಟ್ರದ ನಾಯಕರು ಕೊಡುತ್ತಿರುವ ಎಲ್ಲ ಹೇಳಿಕೆಗಳು ಅತ್ಯಂತ ಖಂಡನೀಯ.