Publish Date: Sun, 06 Nov 2022 (17:56 IST)
Updated Date: Sun, 06 Nov 2022 (17:58 IST)
ಚಿಕ್ಕಮಗಳೂರು ನಗರದ ಬೈಪಾಸ್ ರಸ್ತೆಯ ಆಶ್ರಯ ಯೋಜನೆ ಬಡಾವಣೆಯಲ್ಲಿ ಅನಧಿಕೃತ ಮಸೀದಿ ನಿರ್ಮಾಣ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರ ಸಭೆ ಅಧ್ಯಕ್ಷ್ಯ ವರಸಿದ್ಧಿ ವೇಣುಗೋಪಾಲ್ ಸ್ಥಳ ಪರಿಶೀಲನೆ ನಡೆಸಿದ್ರು. ಅನೇಕ ವರ್ಷಗಳಿಂದ ಇಲ್ಲಿ ಮಸೀದಿ ಇದ್ದು, ಇದು ಅನಧಿಕೃತವಾಗಿ ಕಟ್ಟಲಾಗಿದೆ ಎಂದು ಆರೋಪ ಮಾಡಲಾಗ್ತಿದೆ. ಮಾಹಿತಿ ತಿಳಿದ ಕೂಡಲೇ ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್, ನಗರಸಭೆ ಆಯುಕ್ತ ಬಸವರಾಜ್ ಸ್ಥಳ ಪರಿಶೀಲನೆ ನಡೆಸಿದ್ರು. 3 ದಿನಗಳ ಒಳಗೆ ಮಸೀದಿಗೆ ಸಂಬಂಧಿಸಿದ ದಾಖಲೆ ಹಾಜರುಪಡಿಸುವಂತೆ ಮಸೀದಿ ಆಡಳಿತ ಮಂಡಳಿಗೆ ಅವರು ಸೂಚನೆ ನೀಡಿದ್ದಾರೆ. ಯಾವುದೇ ದಾಖಲೆ ಇಲ್ಲದಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.