Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಹಬ್ಬಗಳನ್ನು ಪೊಲೀಸ್ ಬಂದೋಬಸ್ತ್‌ನಲ್ಲಿ ಮಾಡಬೇಕಾದ ದುರ್ದೈವ: ಪ್ರಿಯಾಂಕ ಖರ್ಗೆ

Priyanka Kharge

Sampriya

ಕಲಬುರಗಿ , ಗುರುವಾರ, 18 ಏಪ್ರಿಲ್ 2024 (14:45 IST)
Photo Courtesy X
ಕಲಬುರಗಿ: ಪ್ರಸ್ತುತ ದಿನದಲ್ಲಿ ಹಬ್ಬಗಳನ್ನು ಪೊಲೀಸ್ ಬಂದೋಬಸ್ತ್‌ನಲ್ಲಿ ಆಚರಣೆ ಮಾಡಬೇಕಾದ ಪರಿಸ್ಥಿತಿ ಬಂದಿರುವುದು ದುರ್ದೈವ ಎಂದು ಸಚಿವ ಪ್ರಿಯಾಂಕ ಖರ್ಗೆ ಹೇಳಿದರು.

ಕಲಬುರಗಿಯಲ್ಲಿ ರಾಮನವಮಿ ದಿನದಂದು ಜೈ ಶ್ರೀರಾಮ ಘೋಷಣೆ ಕೂಗಿದವರ ವಿರುದ್ಧ ಹಲ್ಲೆ ನಡೆಸಿದ ಪ್ರಕರಣ ಸಂಬಂದ ಪ್ರತಿಕ್ರಿಯಿಸಿ ಅವರು ಮಾತನಾಡಿದರು.  ‌

ಕಳೆದ 10 ವರ್ಷಗಳಿಂದ ದೇಶದಲ್ಲಿ ಹಬ್ಬಗಳನ್ನು ಪೊಲೀಸ್ ಬಂದೋಬಸ್ತ್‌ನಲ್ಲಿ ಆಚರಣೆ ಮಾಡಬೇಕಾದ ಪರಿಸ್ಥಿತಿ ಬಂದಿದೆ. ಎಲ್ಲ ಧರ್ಮಗಳಲ್ಲೂ ಶಾಂತಿ ಕದಡುವ ಉದ್ಧೇಶದವರು ಇದ್ದಾರೆ. ತನ್ನ ಧರ್ಮ ಶ್ರೇಷ್ಠ ಎಂಬ ಮನಸ್ಥಿತಿಯಲ್ಲಿ ಈ ರೀತಿ ಗಲಭೆಗಳು ನಡೆಯುತ್ತದೆ ಎಂದು ವಿಷಾಧ ವ್ಯಕ್ತಪಡಿಸಿದರು.

ನಾನು ಅದಮಾರ ಮಠದ ಶಾಲೆಯಲ್ಲಿ ಓದಿದ್ದೇನೆ. ಆಗ ನಮಗೆ ರಂಜಾನ್, ಗಣೇಶ್ ಹಬ್ಬ, ಕ್ರಿಸ್ಮಸ್, ರಾಮನವಮಿಗೆ ರಜೆ ಸಿಗ್ತಿತ್ತು. ರಂಜಾನ್, ರಾಮನವಮಿ ಅದ್ಧೂರಿಯಾಗಿ ಆಚರಣೆ ಮಾಡುತ್ತಿದ್ದರು ಎಂದು ಸ್ಮರಿಸಿದ್ದಾರೆ.

ಈ ಹಿಂದೆ ರಂಜಾನ್ ಬಂದ್ರೆ ನಾವು ಅವರ ಮನೆಗೆ ಹೋಗಿ ಬಿರಿಯಾನಿ ತಿಂದು ಬರ್ತಿದ್ವಿ, ಕ್ರಿಸ್ಮಸ್‌ಗೆ ಹೋಗಿ ಕೇಕ್ ತಿನ್ನುತ್ತಿದ್ವಿ. ಯುಗಾದಿ ಬಂದಾಗ ಅವರು ನಮ್ಮ ಮನೆಗೆ ಬಂದು ಹೋಳಿಗೆ ಊಟ ಮಾಡ್ತಿದ್ದರು. ಆದ್ರೆ ಈಗ ಎಲ್ಲ ಹಬ್ಬಗಳನ್ನು ಪೊಲೀಸ್ ಬಂದೋಬಸ್ತ್‌ನಲ್ಲಿ ಆಚರಣೆ ಮಾಡಬೇಕಿದೆ. 144 ಸೆಕ್ಷನ್ ವಿಧಿಸಿ ಹಬ್ಬ ಆಚರಣೆ ಮಾಡಬೇಕಾದಂತಹ ಪರಿಸ್ಥಿತಿ ಬಂದಿದೆ. ಇದು ಯಾರಿಂದ ಮತ್ತು ಯಾಕೆ ಆಗಿದೆ ಅನ್ನೋದನ್ನ ಯೋಚಿಸಬೇಕು ಎಂದು ಸಲಹೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪುಸ್ತಕ ಮಿವರ್ಶೆ: ವೆಸ್ಟರ್ನ್ ಮೀಡಿಯಾ ನೆರೇಟಿವ್ಸ್ ಆನ್ ಇಂಡಿಯಾ: ಫ್ರಂ ಗಾಂಧಿ ಟು ಮೋದಿ, ಎ ಕ್ರಿಟಿಕಲ್ ಲುಕ್