ಬೆಂಗಳೂರು : ದೋಸ್ತಿ ಸರ್ಕಾರದ ಸಂಪುಟ ವಿಸ್ತರಣೆಯಾದ ನಂತರ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಪೋಟಗೊಂಡ ಹಿನ್ನಲೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಸಭೆ ನಡೆಸಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನ 8 ಶಾಸಕರು ಅಸಮಾಧಾನಗೊಂಡಿದ್ದು, ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಈಗಾಗಲೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುವ ವದಂತಿ ಹಬ್ಬಿದೆ. ರಾಮಲಿಂಗರೆಡ್ಡಿ ಈಗಾಗಲೇ ತಮ್ಮ ಸ್ಥಾನ ಕೈತಪ್ಪಲು ಪ್ರಭಾವಿ ನಾಯಕರೇ ಕಾರಣವೆಂದು ಆರೋಪಿಸಿದ್ದಾರೆ.
ಇದೀಗ ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಶಾಸಕರು ಭಂಡಾಯವೆಳುವ ಮೊದಲೇ ಅವರೆಲ್ಲರನ್ನು ಕರೆಸಿ ಚರ್ಚೆ ನಡೆಸಿ ಸಮಾಧಾನಗೊಳಿಸಲು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಮುಂದಾಗಿದ್ದಾರೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.