Publish Date: Tue, 11 Sep 2018 (20:38 IST)
Updated Date: Tue, 11 Sep 2018 (20:41 IST)
ರಾಜ್ಯ ಸಮ್ಮಿಶ್ರ ಸರಕಾರದ್ದು ಅನೈತಿಕ ಮದುವೆ ಎಂದು ಕೇಂದ್ರದ ಸಚಿವ ವಾಗ್ದಾಳಿ ನಡೆಸಿದ್ದಾರೆ.
ಕೇಂದ್ರದ ಕುಡಿಯುವ ನೀರು ಮತ್ತು ನೈರ್ಮಲ್ಯ ಸಚಿವ ರಮೇಶ ಜಿಗಜಿಣಗಿ, ರಾಜ್ಯದ ಸಮ್ಮಿಶ್ರ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ. ರಾಜ್ಯದ ಅಭಿವೃದ್ಧಿ ಸಂಪೂರ್ಣ ಕಡೆಗಣಿಸಲಾಗಿದೆ. ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ದಕ್ಷಿಣ ಕರ್ನಾಟಕಕ್ಕಷ್ಟೇ ಸೀಮಿತವಾಗಿದ್ದಾರೆ. ಉತ್ತರ ಕರ್ನಾಟಕದಲ್ಲಿ ಮಳೆ ಇಲ್ಲದೇ ಇದ್ದರೂ ಇತ್ತ ಗಮನ ಹರಿಸುತ್ತಿಲ್ಲ.
ಈ ಕಡೆ ಬರಲು ಸಿಎಂಗೇನು ದಾಡಿ ಬಡಿದಿದೆಯಾ? ಎಂದು ಖಾರವಾಗಿ ತಿರುಗೇಟು ನೀಡಿದ್ದಾರೆ. ಬಿಜೆಪಿ ಆಪರೇಷನ್ ಕಮಲ ವಿಚಾರ ಕುರಿತು ಪ್ರತಿಕ್ರಿಯಿಸಿದ್ದು, ಬಿಜೆಪಿ ಆಪರೇಷನ್ ಕಮಲ ಮಾಡ್ತಿಲ್ಲ. ಅವರಾಗಿಯೇ ಬಿಜೆಪಿಗೆ ಬರ್ತಿದ್ದಾರೆ.
ರಾಜ್ಯ ಸರಕಾರ ಸರಿಯಾಗಿ ಕೆಲಸ ಮಾಡದ ಹಿನ್ನಲೆ ಸತೀಶ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದರು.