Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಕೃಪಾಪೋಷಿತ ಜನರ ಪ್ರೇರಣೆಯಿಂದ ರೈತರ ಪ್ರತಿಭಟನೆ ನಡೆಯುತ್ತಿದೆ ಎಂದ ಕೇಂದ್ರ ಸಚಿವ

ಕೃಪಾಪೋಷಿತ ಜನರ ಪ್ರೇರಣೆಯಿಂದ ರೈತರ ಪ್ರತಿಭಟನೆ ನಡೆಯುತ್ತಿದೆ ಎಂದ ಕೇಂದ್ರ ಸಚಿವ
ಮೈಸೂರು , ಶನಿವಾರ, 6 ಫೆಬ್ರವರಿ 2021 (13:01 IST)
ಮೈಸೂರು : ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರ ಧರಣಿ ವಿಚಾರಕ್ಕೆ ಸಂಬಂಧಿಸಿದಂತೆ ಕೃಪಾಪೋಷಿತ ಜನರ ಪ್ರೇರಣೆಯಿಂದ ರೈತರ ಪ್ರತಿಭಟನೆ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಟ್ಟ ಭದ್ರ ಹಿತಾಸಕ್ತಿಯಿಂದ ರೈತರ ಪ್ರತಿಭಟನೆ ನಡೆಯುತ್ತಿದೆ. ದೇಶಕ್ಕೆ ಸ್ವಾತಂತ್ರ್ಯ ಬಂದಿದೆ, ಆದರೆ ರೈತರಿಗೆ ಇನ್ನೂ ಸಿಕ್ಕಿಲ್ಲ. ರೈತರ ಬೆಳೆ ಮುಕ್ತವಾಗಿ ಮಾರಲು ಸ್ವಾತಂತ್ರ್ಯ ನೀಡುತ್ತಿದ್ದೇವೆ. ರೈತರಿಗೆ ಬೆಂಬಲ ಬೆಲೆ ನೀಡಿದ್ದು ಪ್ರಧಾನಿ ಮೋದಿ ಸರ್ಕಾರ. ರೈತರು ಎಪಿಎಂಸಿ ಕೈಗೊಂಬೆಯಾಗಿ ಇರೋದು ಬೇಡ. ರೈತರು ಸ್ವತಂತ್ರವಾಗಿ ಬೆಳೆ ಮಾರಲು ಅವಕಾಶ ಕೊಟ್ಟಿದ್ದೇವೆ. ಬಂಡವಾಳಶಾಹಿಗಳ ಕೈಗೊಂಬೆಯಾಗ್ತಾರೆ ಅನ್ನೋದು ಸುಳ್ಳು ಎಂದು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ತನ್ನನ್ನು ಬಿಟ್ಟು ಇನ್ನೊಬ್ಬನ ಜತೆ ಹೊರಟವಳಿಗೆ ಗೆಳೆಯನೊಬ್ಬ ಮಾಡಿದ್ದೇನು?