Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಅಸ್ವಾಭಾವಿಕ ಲೈಂಗಿಕ ಕ್ರಿಯೆ ಅತ್ಯಾಚಾರವೆಂದು ಪರಿಗಣಿಸಬೇಕು

ಅಸ್ವಾಭಾವಿಕ ಲೈಂಗಿಕ ಕ್ರಿಯೆ ಅತ್ಯಾಚಾರವೆಂದು ಪರಿಗಣಿಸಬೇಕು
ಬೆಂಗಳೂರು , ಬುಧವಾರ, 23 ಮಾರ್ಚ್ 2022 (15:54 IST)
ಪತಿಯ ವಿರುದ್ಧವೇ ಪತ್ನಿ ಅತ್ಯಾಚಾರ ಕೇಸು ದಾಖಲಿಸಿದ್ದಾರೆ. ಪತಿ ವಿರುದ್ಧ ಅತ್ಯಾಚಾರ ಆರೋಪ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.
 
ಒಡಿಶಾ ಮೂಲದ ದಂಪತಿ ಬೆಂಗಳೂರಿನಲ್ಲಿ ನೆಲೆಸಿದ್ದರು. ಪತ್ನಿ ಮೇಲೆ ಪತಿ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ್ದ.
ಲೈಂಗಿಕ ಗುಲಾಮಳಂತೆ ಪತಿ ತನ್ನನ್ನು ಬಳಸಿಕೊಂಡಿರುವುದಾಗಿ ಮಹಿಳೆ ಆರೋಪಿಸಿದ್ದು, ಅಪ್ರಾಪ್ತ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಕೂಡ ಮಾಡಿದ್ದಾರೆ. ಬೆಂಗಳೂರು ಪೂರ್ವ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 
ವಿಚಾರಣಾ ನ್ಯಾಯಾಲಯ ರೇಪ್ ಆರೋಪ ಕೈಬಿಡಲು ನಿರಾಕರಿಸಿದೆ. ಆರೋಪವನ್ನು ರದ್ದು ಮಾಡುವಂತೆ ಕೋರಿ ಪತಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಪತಿಗೆ ಅತ್ಯಾಚಾರ ಪ್ರಕರಣದಲ್ಲಿ ವಿನಾಯಿತಿ ಇದೆ ಎಂದು ವಾದಿಸಿದ್ದರು. ಪತಿಯ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದೆ.
 
ಪತಿಯ ವಿರುದ್ಧವೂ ಅತ್ಯಾಚಾರ ಕೇಸ್ ಪರಿಗಣಿಸಬೇಕು. ಪತಿಯ ಕೃತ್ಯದಿಂದ ಪತ್ನಿಯ ಮಾನಸಿಕ ದೈಹಿಕವಾಗಿ ಪರಿಣಾಮ ಉಂಟಾಗುತ್ತದೆ. ಪತ್ನಿಯ ಆತ್ಮದ ಮೇಲೆ ಅಳಿಸಲಾಗದ ಕಲೆಯಾಗುತ್ತದೆ. ಅತ್ಯಾಚಾರ ಪ್ರಕರಣಗಳಲ್ಲಿ ಪತಿಗಿರುವ ವಿನಾಯಿತಿ ರದ್ಧತಿ ಸೂಕ್ತ. ಶಾಸಕಾಂಗ ಈ ಬಗ್ಗೆ ಚಿಂತನೆ ನಡೆಸಬೇಕು ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.
 
ಅಮೆರಿಕ, ಆಸ್ಟ್ರೇಲಿಯಾ, ನ್ಯೂಜಿಲೆಂಡ್ ಸೇರಿ ಕೆಲವು ದೇಶಗಳಲ್ಲಿ ಪತ್ನಿಯ ವಿರುದ್ಧವಾಗಿ ಸಂಭೋಗಿಸಿದರೆ ಅಪರಾಧ ಎಂದು ಪರಿಗಣಿಸಲಾಗುತ್ತದೆ. ಇಂಗ್ಲೆಂಡ್ ನಲ್ಲಿಯೂ ಪತಿಗೆ ಈಗಿರುವ ವಿನಾಯಿತಿ ತೆಗೆಯಲಾಗಿದೆ. ರೇಪ್ ವಿಚಾರದಲ್ಲಿ ಮಹಿಳೆ, ಪತ್ನಿಯ ನಡುವೆ ತಾರತಮ್ಯ ಸರಿಯಲ್ಲ. ವಿವಾಹ ಪತ್ನಿಯ ಮೇಲೆ ದೌರ್ಜನ್ಯವೆಸಗಲು ನೀಡುವ ಅನುಮತಿಯಲ್ಲ ಎಂದು ಹೇಳಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಏಪ್ರಿಲ್ 1ಕ್ಕೆ ಗ್ರಾಹಕರಿಗೆ ಕರೆಂಟ್ ಶಾಕ್