ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶ್ರೀಲಂಕಾಗೆ 1 ಬಿಲಿಯನ್ ಡಾಲರ್ ಆರ್ಥಿಕ ನೆರವನ್ನು ನೀಡಲಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.
ಆಹಾರ, ಔಷಧ ಹಾಗೂ ಇನ್ನಿತರ ಅಗತ್ಯ ವಸ್ತುಗಳನ್ನು ಖರೀದಿಸಲು ಲಂಕಾಗೆ ನೆರವಾಗಲು ಸಾಲ ನೀಡಲಾಗುತ್ತಿದೆ ಎಂದು ಹಣಕಾಸು ಸಚಿವಾಲಯ ಹೇಳಿದೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಆರ್ಥಿಕ ಸಚಿವಾಲಯ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ವಿದೇಶಾಂಗ ಇಲಾಖೆ ಸಚಿವ ಎಸ್ ಜೈ ಶಂಕರ್ ಲಂಕಾದ ಹಣಕಾಸು ಸಚಿವ ಬಸಿಲ್ ರಾಜಪಕ್ಸ ಅವರನ್ನು ಭೇಟಿ ಮಾಡಿದ್ದು, ಹಲವಾರು ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ತಿಳಿಸಿದೆ. ಇದೇ ವೇಳೆ ಎಸ್ ಬಿಐ ಹಾಗೂ ಲಂಕಾ ಸರ್ಕಾರದ ನಡುವೆ 1 ಬಿಲಿಯನ್ ಅಮೆರಿಕನ್ ಡಾಲರ್ ಆರ್ಥಿಕ ನೆರವು ನೀಡುವ ಒಪ್ಪಂದ ನಡೆದಿದೆ ಎಂದು ತಿಳಿಸಿದೆ.
ಇದಕ್ಕೂ ಮುನ್ನ ಭಾರತದ ಎಕ್ಸ್ ಪೋರ್ಟ್ ಹಾಗೂ ಇಂಪೋರ್ಟ್ ಬ್ಯಾಂಕ್ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಲಂಕಾಗೆ 500 ಮಿಲಿಯನ್ ಡಾಲರ್ ನೆರವು ಘೋಷಿಸಿತ್ತು