ಬೆಂಗಳೂರು : ಚುನಾವಣೆ ಹೊತ್ತಲ್ಲಿ ರಾಜಕಾರಣಿಗಳಿಗೆ ಹೊಸ ಅಸ್ತ್ರ ಸಿಕ್ಕಿದೆ. ಅದುವೇ ಲಿಂಗಾಯತ ಸಿಎಂ ಅಸ್ತ್ರ. ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಬಿಜೆಪಿ ವಿರುದ್ಧ ನೇರಾನೇರ ಸಮರ ನಡೆಯುತ್ತಿದೆ.
ಚುನಾವಣೆ ಸಮಯದದಲ್ಲಿ ಇದು ಬಿಜೆಪಿಗೆ ಟೆನ್ಷನ್ ಹೆಚ್ಚಿಸಿದ್ದು ಲಿಂಗಾಯತರ ಕಡೆಗಣನೆ ಆರೋಪದಿಂದ ಚುನಾವಣೆ ಹೊಡೆತದ ಆತಂಕ ಎದುರಾಗಿದೆ. ಈ ಲಿಂಗಾಯತ ಸಿಎಂ ಟೆನ್ಷನ್ ವಿಚಾರಕ್ಕೆ ಅಮಿತ್ ಶಾ ತಮ್ಮದೇ ಆದ ಸೂತ್ರವೊಂದನ್ನು ನೀಡಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ ರಾತ್ರಿ ರಾಜ್ಯ ನಾಯಕರ ಜೊತೆ ನಡೆಸಿದ ಸಭೆಯಲ್ಲಿ ಲಿಂಗಾಯತ ಕಡೆಗಣನೆ ಅಸ್ತ್ರ ಎದುರಿಸಲು ರಾಜ್ಯ ನಾಯಕರಿಗೆ ಅಮಿತ್ ಶಾ ತಂತ್ರವನ್ನು ರವಾನಿಸಿದ್ದಾರೆ. ಈ ಲಿಂಗಾಯತ ದಾಳವನ್ನು ಚುನಾವಣೆ ಮುಗಿಯುವವರೆಗೂ ಬಳಕೆ ಮಾಡುವಂತೆ ತಾಕೀತು ಮಾಡಿದ್ದಾರೆ.