ವಿಧಾನಸಭೆ ಅಧಿವೇಶನದಲ್ಲಿ ಇಂದು ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ನಡೆಯುವ ಚರ್ಚೆಗೆ ಉತ್ತರ ಕರ್ನಾಟಕ ಭಾಗದ ಶಾಸಕರೇ ಗೈರುಹಾಜರಾಗಿ ಬೇಜವಾಬ್ದಾರಿ ಮೆರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಜ್ಯದಲ್ಲಿರುವ 224 ಶಾಸಕರಲ್ಲಿ ಕೇವಲ 39 ಶಾಸಕರು ಸದನಕ್ಕೆ ಹಾಜರಾಗಿರುವುದು ಜನತೆಯ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಹಿಂದುಳಿದ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಚರ್ಚೆಗಾಗಿ ದಿನ ನಿಗದಿ ಮಾಡಿದ್ದರೂ ಉತ್ತರ ಕರ್ನಾಟಕ ಭಾಗದ ಶಾಸಕರೇ ಗೈರು ಹಾಜರಾಗಿರುವುದು ಶಾಸಕರಿಗೆ ಅಭಿವೃದ್ಧಿ ಬಗ್ಗೆ ಕಾಳಜಿಯಿಲ್ಲ ಎನ್ನುವಂತಾಗಿದೆ ಎಂದು ಜನರು ಕಿಡಿಕಾರಿದ್ದಾರೆ
ಕೋಟಿ ಕೋಟಿ ರೂಪಾಯಿ ವೆಚ್ಚ ಮಾಡಿ ವಿಧಾನಸಭೆ ಅಧಿವೇಶನ ನಡೆಸುತ್ತಿದ್ದರೂ ಶಾಸಕರು ಅದರ ಅರಿವಿಲ್ಲದಂತೆ ಶಾಸಕರು ವರ್ತಿಸುತ್ತಿರುವುದು ನೋಡಿದಲ್ಲಿ ಶಾಸಕರಿಂದಲೇ ಪ್ರಜಾಪ್ರಭುತ್ವಕ್ಕೆ ಮಸಿ ಬಳೆದಂತಾಗಿದೆ.
ಉತ್ತರ ಕರ್ನಾಟಕ ಭಾಗದಲ್ಲಿ ಹಲವಾರು ಸಮಸ್ಯೆಗಳಿದ್ದರೂ ಸಮಸ್ಯೆಗಳಿಗೆ ಅಧಿವೇಶನದಲ್ಲಿ ಪರಿಹಾರ ಕಂಡುಕೊಳ್ಳುವ ಬದಲಿಗೆ ಗೈರು ಹಾಜರಾಗಿ ತಮ್ಮ ಜನಪರ ಕಾಳಜಿ ಮೆರೆದಿದ್ದಾರೆ ಎಂದು ಜನರು ಕಿಡಿಕಾರಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.