Select Your Language

Notifications

webdunia
webdunia
webdunia
webdunia

ಡಿಕೆ ಶಿವಕುಮಾರ್ ಎಲ್ಲಾ ಮಾಡುತ್ತಿರುವುದು ಮುಖ್ಯಮಂತ್ರಿ ಪಟ್ಟಕ್ಕಾಗಿ ಎಂದ ಸೋಮಣ್ಣ

V Somanna
Photo Courtesy: Twitter
ಬೆಂಗಳೂರು: ರಾಜ್ಯದಲ್ಲಿ ಈಗ ಭಾರೀ ಸಂಚಲನ ಎಬ್ಬಿಸಿರುವ ಪ್ರಜ್ವಲ್ ರೇವಣ್ಣ ವಿಡಿಯೋ ಕೇಸ್ ನಲ್ಲಿ ಡಿಕೆ ಶಿವಕುಮಾರ್ ಕೈವಾಡವಿದೆ ಎಂದು ಪ್ರತಿಪಕ್ಷಗಳು ಆರೋಪಿಸುತ್ತಿವೆ.

ಪ್ರಜ್ವಲ್ ವಿಡಿಯೋ ರಿಲೀಸ್ ಮಾಡಲು ಡಿಕೆ ಶಿವಕುಮಾರ್ ಕುಮ್ಮಕ್ಕು ಕಾರಣ ಎಂಬ ಆರೋಪವಿದೆ. ಈ ಬಗ್ಗೆ ಇಂದು ಮಾಜಿ ಸಚಿವ, ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಪ್ರತಿಕ್ರಿಯಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಡಿಕೆ ಶಿವಕುಮಾರ್ ಇಷ್ಟೆಲ್ಲಾ ಮಾಡುತ್ತಿರುವುದು ಸಿಎಂ ಕುರ್ಚಿ ಮೇಲಿನ ಆಸೆಯಿಂದ. ಅವರು ಮುಖ್ಯಮಂತ್ರಿಯಾಗಲಿ ಎಂದು ನನಗೂ ಆಸೆಯಿತ್ತು. ಆದರೆ ಮುಖ್ಯಮಂತ್ರಿ ಪಟ್ಟಕ್ಕಾಗಿ ಇಷ್ಟೆಲ್ಲಾ ದುಡುಕುವುದು ಬೇಡ ಎಂದು ಸೋಮಣ್ಣ ಟಾಂಗ್ ಕೊಟ್ಟಿದ್ದಾರೆ.

ಸಿಎಂ ಸಿದ್ದರಾಮಯ್ಯ, ಸಿಂಧ್ಯಾ ಮುಂತಾದವರೆಲ್ಲಾ ರಾಜಕೀಯಣದಲ್ಲಿ ಸಂಸ್ಕಾರವನ್ನು ಕಲಿತಿದ್ದೇ ದೇವೇಗೌಡರಿಂದ. ಪ್ರಜ್ವಲ್ ದೇವೇಗೌಡರ ಮೊಮ್ಮಗ ಎಂಬ ಕಾರಣಕ್ಕೆ ಅವರು ತಪ್ಪು ಮಾಡಿದರೂ ರಿಯಾಯಿತಿ ತೋರುವುದು ಬೇಡ. ಅವರು ತಪ್ಪು ಮಾಡಿದ್ದರೆ ಗಲ್ಲಿಗೇರಿಸಲಿ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಕರ್ನಾಟಕ ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟ