ಬೆಂಗಳೂರು : ಇಂದಿನಿಂದ ದೇಶಾದ್ಯಂತ ಮಕ್ಕಳಿಗೆ ಲಸಿಕೆ ವಿತರಣೆ ಅಭಿಯಾನ ಶುರುವಾಗಲಿದೆ.
ಸಿಲಿಕಾನ್ ಸಿಟಿಯಲ್ಲೂ 15ರಿಂದ 18 ವರ್ಷದವರಿಗೆ ಲಸಿಕೆ ನೀಡಲು ಭರ್ಜರಿ ತಯಾರಿ ನಡೆದಿದೆ. ಬೆಂಗಳೂರಿನ ಮೂಡಲಪಾಳ್ಯದ ಭೈರವೇಶ್ವರಿನಗರದ ಬಿಬಿಎಂಪಿ ಕಾಲೇಜಿನಲ್ಲಿ ಲಸಿಕಾ ಕಾರ್ಯಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಬೆಳಗ್ಗೆ 9:30ಕ್ಕೆ ಚಾಲನೆ ನೀಡಲಿದ್ದಾರೆ.
ರಾಜ್ಯದಲ್ಲಿ ಅಂದಾಜು 45 ಲಕ್ಷ ಮಕ್ಕಳು ಕೋವಿಡ್ ಲಸಿಕೆ ಪಡೆಯಲು ಅರ್ಹತೆ ಹೊಂದಿದ್ದು. ಬೆಂಗಳೂರಿನಲ್ಲಿ 7 ಲಕ್ಷ ಮಕ್ಕಳನ್ನ ಬಿಬಿಎಂಪಿ ಗುರುತಿಸಿದೆ.
ಶಾಲೆ ಕಾಲೇಜುಗಳಲ್ಲೇ ಮಕ್ಕಳಿಗೆ ವ್ಯಾಕ್ಸಿನ್ ನೀಡಲು ತೀರ್ಮಾನ ಮಾಡಲಾಗಿದೆ. ರಾಜ್ಯದಲ್ಲಿ ಪ್ರಸ್ತುತ 25 ಲಕ್ಷ ಡೋಸ್ ಕೋವ್ಯಾಕ್ಸಿನ್ ಲಸಿಕೆಯನ್ನು ಸಂಗ್ರಹಿಸಿಟ್ಟುಕೊಳ್ಳಲಾಗಿದ್ದು, ನಾಳೆಯೊಳಗೆ 10ರಿಂದ 12 ಲಕ್ಷ ಡೋಸ್ ಲಸಿಕೆ ಕೇಂದ್ರದಿಂದ ಬರುವ ನಿರೀಕ್ಷೆ ಇದೆ.