Publish Date: Fri, 02 Jul 2021 (18:20 IST)
Updated Date: Fri, 02 Jul 2021 (18:22 IST)
ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 2984 ಹೊಸದಾಗಿ ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 88 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶುಕ್ರವಾರ ಪ್ರಕಟಿಸಿದ ಬುಲೆಟಿನ್ ಪ್ರಕಾರ ರಾಜಧಾನಿ ಬೆಂಗಳೂರಿನಲ್ಲಿ 593 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದರೆ, 11 ಮಂದಿ ಮೃತಪಟ್ಟಿದ್ದಾರೆ.