ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರವನ್ನು ಸಿಬಿಐ ವಹಿಸಬೇಕೆಂದು ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ.
ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆಯನ್ನು ನಡೆಸಿದ ಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಬುಧವಾರ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿ ತೀರ್ಪು ಪ್ರಕಟಿಸಿದೆ. ಈಗಾಗಲೇ ಈ ಪ್ರಕರಣದ ಕುರಿತು ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ. ಮಾಜಿ ಸಚಿವ ಬಿ. ನಾಗೇಂದ್ರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ.
ಸಿಬಿಐ ತನಿಖೆಗೆ ಕೋರಿ ಯೂನಿಯನ್ ಬ್ಯಾಂಕ್ ಸಲ್ಲಿಕೆ ಮಾಡಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈಗಾಗಲೇ ಈ ಪ್ರಕರಣದ ಕುರಿತು ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ 94.73 ಕೋಟಿ ಹಣ ಅಕ್ರಮ ವರ್ಗಾವಣೆ ನಡೆದಿದೆ ಎಂಬ ಗಂಭೀರ ಆರೋಪ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಸಂಬಂಧ ಪರಿಶಿಷ್ಟ ವರ್ಗಗಳ ಕಲ್ಯಾಣ ಖಾತೆ ಸಚಿವ ಬಿ. ನಾಗೇಂದ್ರ ಅವರನ್ನು ವಶಕ್ಕೆ ಪಡೆಯಲಾಗಿತ್ತು. ಜಾಮೀನಿನ ಮೂಲಕ ಹೊರಬಂದಿರುವ ನಾಗೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಯೂನಿಯನ್ ಬ್ಯಾಂಕ್ ಖಾತೆಯಿಂದ ಹಣ ಬಿಡುಗಡೆಯಾಗಿತ್ತು. ಆದ್ದರಿಂದ ಯೂನಿಯನ್ ಬ್ಯಾಂಕ್ ಈ ಕುರಿತು ಸಿಬಿಐ ತನಿಖೆಗೆ ಆದೇಶಿಸಬೇಕು ಎಂದು ಕರ್ನಾಟಕ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಕೆ ಮಾಡಿತ್ತು.